7 ನೇ ವೇತನ ಆಯೋಗ : ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಸಲು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮನವಿ

ಬೆಂಗಳೂರು, ಜ. 21: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಗೂ ಸಂಘದ ಪದಾಧಿಕಾರಿಗಳ ನಿಯೋಗವು, 7ನೇ ವೇತನ ಆಯೋಗದ ಅಧ್ಯಕ್ಷರಾದ ಸುಧಾಕರ್ ರಾವ್ ಹಾಗೂ ಸದಸ್ಯರನ್ನು ಇಂದು ಭೇಟಿ ಮಾಡಿ, ಶೀಘ್ರವಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಮನವಿ ಮಾಡಿತು.

2023 ಜ.18 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಪಡಾಕ್ಷರಿ, ಸಂಘದ ಪದಾಧಿಕಾರಿಗಳು, ವೇತನ ಆಯೋಗದ ಅಧ್ಯಕ್ಷರು, ಸದಸ್ಯರು ಮತ್ತು ಸದಸ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಂಘದ ಪದಾಧಿಕಾರಿಗಳಾದ ಆರ್.ಶ್ರೀನಿವಾಸ್‌, ಮಲ್ಲಿಕಾರ್ಜುನ ಬಳ್ಳಾರಿ ಎಂ.ವಿ.ರುದ್ರಪ್ಪ, ಬಸವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ, ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಸಿದ್ಧಬಸಪ್ಪ.ಬಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆಯೋಗದ ಅಧ್ಯಕ್ಷರು ಮಾತನಾಡಿ, ಆಯೋಗವು ಶೀಘ್ರವಾಗಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು. ಈಗಾಗಲೇ ಪ್ರಶ್ನಾವಳಿ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಅದರ ಪ್ರತಿಯನ್ನು ರಾಜ್ಯಾಧ್ಯಕ್ಷರಿಗೆ ನೀಡಿ ತಮ್ಮ ಸಂಘ ಹಾಗೂ ಸರ್ಕಾರಿ ನೌಕರರ ಸಹಕಾರ ನೀಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕರು ಮಾತನಾಡಿ, ಆಯೋಗದ ಎಲ್ಲಾ ಸದಸ್ಯರನ್ನು ಅಭಿನಂದಿಸಿ, 6 ಲಕ್ಷ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ನಮ್ಮ ಸಂಘವು ರಾಜ್ಯದ ಏಕೈಕ ಬೃಹತ್ ಸಂಘಟನೆಯಾಗಿದ್ದು, ಮುಂದಿನ ದಿನಗಳಲ್ಲಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಹಾಗೂ 2023 ಮಾರ್ಚ್ 31 ಕ್ಕೆ 5 ವರ್ಷ ಪೂರ್ಣಗೊಳ್ಳುವ ಮುಂಚಿತವಾಗಿ ಸರ್ಕಾರಕ್ಕೆ ವೇತನ ಆಯೋಗದ ವರದಿಯನ್ನು ಸಲ್ಲಿಸುವಂತೆ ಮನವಿ ಮಾಡಿದರು.

ವೇತನ ಹಾಗೂ ಭತ್ಯೆಗಳಿಗೆ ಸಂಬಂಧಿಸಿದಂತೆ ಈ ಹಿಂದಿನ ವೇತನ ಆಯೋಗಗಳು 2 ಹಂತಗಳಲ್ಲಿ ವರದಿಗಳನ್ನು ನೀಡುವ ಸಂಪ್ರದಾಯವಿದ್ದು, ಅದರಂತೆ ಫೆಬ್ರವರಿ-2023 ಅಂತ್ಯದೊಳಗೆ ಪ್ರಥಮ ಹಂತದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ, ರಾಜ್ಯ ಸರ್ಕಾರಿ ನೌಕರರು ಹಾಲಿ ಪಡೆಯುತ್ತಿರುವ ವೇತನ ಭತ್ಯೆಗಳಿಗೆ ಗರಿಷ್ಠ ಪ್ರಮಾಣದ ಫಿಟ್‌ ಮೆಂಟ್ ಸೌಲಭ್ಯವನ್ನು ಕಲ್ಪಿಸಲು ಶಿಫಾರಸ್ಸು ಮಾಡುವಂತೆ ಮನವಿ ಮಾಡಲಾಯಿತು.

ರಾಜ್ಯ ಸಂಘ ಈಗಾಗಲೇ ವೃಂದ ಸಂಘಗಳ ಸಭೆಯನ್ನು ಕರೆದು ವೇತನ ಭತ್ಯೆಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಸಂಗ್ರಹಿಸಲಾಗಿದ್ದು, ಕ್ರೂಢೀಕೃತ ವಿವಿಧ ಇಲಾಖೆಗಳ ಸಮಗ್ರ ಮಾಹಿತಿಯ ವರದಿಯನ್ನು ಆಯೋಗದ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದೆಂದು ತಿಳಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *