ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತಂತೆ ಡಿಸಿಯಿಂದ ಮಹತ್ವದ ಸಭೆ

ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತಂತೆ ಡಿಸಿಯಿಂದ ಮಹತ್ವದ ಸಭೆ ಆ.11 ರಿಂದ 78 ಆಸನದ ಎಟಿಆರ್-72 ಇಂಡಿಗೋ ವಿಮಾನ ಸಂಚಾರ

ಆ.11 ರಿಂದ 78 ಆಸನದ ಎಟಿಆರ್-72 ಇಂಡಿಗೋ ವಿಮಾನ ಸಂಚಾರ

ಶಿವಮೊಗ್ಗ, ಜು. 15: ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭವಾಗುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರ ಅಧ್ಯಕ್ಷತೆಯಲ್ಲಿ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ, ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.

ಜಿಲ್ಲಾಧಿಕಾರಿಗಳು ಮಾತನಾಡಿ, ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು. ಇಂಡಿಗೋ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅವರು ವೀಕ್ಷಣೆ ವೇಳೆ ನೀಡಿರುವ ಅಂಶಗಳು ಹಾಗೂ ಹೆಚ್ಚುವರಿ ಸೌಕರ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.

78 ಆಸನ ವ್ಯವಸ್ಥೆಯುಳ್ಳ ಎಟಿಆರ್-72 ಇಂಡಿಗೋ ವಿಮಾನ ಆ.11 ರಂದು ಕಾರ್ಯಾಚರಣೆ ನಡೆಸಲಿದ್ದು, ಅವರು ಅಬ್ಸರ್ವೇಷನ್ ನಲ್ಲಿ ಕೇಳಿರುವ ಸೌಕರ್ಯಗಳ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಅಧಿಕಾರಿಗಳು ಮತ್ತು ವಿಮಾಣ ನಿಲ್ದಾಣ ನಿರ್ದೇಶಕರಿಗೆ ಸೂಚಿಸಿದರು.

ಹಾಗೂ ವಿಮಾನ ನಿಲ್ದಾಣದ ಅಧಿಕೃತ ವೆಬ್‍ಸೈಟ್ ನ್ನು ಅಭಿವೃದ್ದಿಪಡಿಸಿ ಅಂದು ಗಣ್ಯರಿಂದ ಲೋಕಾರ್ಪಣೆ ಮಾಡಿಸಬೇಕು. ಗಣ್ಯರ ಸ್ವಾಗತ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕೆ ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದರು. 

ವಿಮಾನ ನಿಲ್ದಾಣಕ್ಕೆ ಅಗತ್ಯವಾದ ವಾಹನಗಳ ಸೌಕರ್ಯ, ಕಾಫಿ-ತಿಂಡಿ ಮಳಿಗೆಗಳು, ಅಗತ್ಯ ಆಂಬುಲೆನ್ಸ್ ಹಾಗೂ ಜಿಲ್ಲಾ ಪ್ರವಾಸೋದ್ಯಮಕ್ಕೆ ಒಂದು ಪ್ರತ್ಯೇಕ ಮಳಿಗೆಯನ್ನು ಸಿದ್ದಪಡಿಸುವಂತೆ ತಿಳಿಸಿದರು.

ವಿಮಾನದ ನಿಲ್ದಾಣದ ಸುತ್ತಮುತ್ತ ನಿಯಮಾನುಸಾರ ಬಫರ್‍ಝೋನ್ ಅಧಿಸೂಚನೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು ಅಂದು ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಸೇರಿದಂತೆ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯವಾದ ಎಲ್ಲ ಅಂಶಗಳ ಕುರಿತು ಸಮರ್ಪಕವಾಗಿ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ(ಪ್ರಭಾರ) ಮೇಘನಾ ಆರ್, ಶಿವಮೊಗ್ಗ ಎಸಿ ರವಿಚಂದ್ರನ್‍ನಾಯಕ್, ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರ ಸಂಪತ್‍ಕುಮಾರ್ ಪಿಂಗಳೆ, ಪೊಲೀಸ್ ಪಡೆ ಅಸಿಸ್ಟೆಂಟ್ ಕಮಾಂಡೆಂಟ್ ಚಂದ್ರಶೇಖರ್, ಕೆಎಸ್‍ಐಐಡಿಸಿ ಅಧಿಕಾರಿಗಳು, ಇತರೆ ಅಧಿಕಾರಿಗಳು, ಗುತ್ತಿಗೆದಾರರು ಹಾಜರಿದ್ದರು.

ಬೆಂಗಳೂರಿನಿಂದ ವಿಮಾನದಲ್ಲಿ ಆಗಮಿಸಲಿರುವ ಸಚಿವರು

*** ಶಿವಮೊಗ್ಗ ವಿಮಾನ ನಿಲ್ದಾಣ ನಿರ್ದೇಶಕ ಕ್ಯಾಪ್ಟನ್  ಶಮಂತ್ ಅವರು ಸಭೆಯಲ್ಲಿ ಮಾತನಾಡಿ, ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ್ ರವರು

ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ್

ಆ.11 ರ ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನಿಂದ ಇಂಡಿಗೋ ವಿಮಾನದಲ್ಲಿ ಹೊರಟು ಬೆಳಿಗ್ಗೆ 11 ಕ್ಕೆ ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮತ್ತೆ ಬೆಳಿಗ್ಗೆ 11.20 ಕ್ಕೆ ಶಿವಮೊಗ್ಗದಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *