ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ನ್ಯಾಯಬೆಲೆ ಅಂಗಡಿ ತೆರೆಯಲು ಆಹಾರ ಇಲಾಖೆಯಿಂದ ಅರ್ಜಿ ಆಹ್ವಾನ

ಶಿವಮೊಗ್ಗ, ಜೂ. 17: ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳ ವಿವಿಧೆಡೆ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಶಿವಮೊಗ್ಗ ಮತ್ತು ಭದ್ರಾವತಿಯ ಆಹಾರ ಇಲಾಖೆಯ ಅನೌಪಚಾರಿಕ ಪಡಿತರ ಪ್ರದೇಶ / ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ಕುರಿತಂತೆ ಜು. 17 ರಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ವಿವರ ಈ ಮುಂದಿನಂತಿದೆ.

ಶಿವಮೊಗ್ಗ ನಗರ ಪ್ರದೇಶ ವ್ಯಾಪ್ತಿಯ ಆರ್.ಎಂ.ಎಲ್. ನಗರದ ಎಡಭಾಗ, ಕನಕ ವಿದ್ಯಾ ಸಂಸ್ಥೆಯ ಹತ್ತಿರ, ಮಂಜುನಾಥ ಬಡಾವಣೆ, ನಾಗರಕಟ್ಟೆ ದೇವಸ್ಥಾನದ ಹತ್ತಿರ, ಶಾಂತಿನಗರ ಮುಖ್ಯರಸ್ತೆ, ಶ್ರೀ ಶನೇಶ್ವರಸ್ವಾಮಿ ದೇವಸ್ಥಾನದ ಹತ್ತಿರ, ಗಾಡಿಕೊಪ್ಪ ಪುರದಾಳು ರಸ್ತೆ,

ಗಾಡಿಕೊಪ್ಪ ತಾಂಡ, ಟಿಪ್ಪುನಗರ ಬಲಭಾಗ ಅಲ್ ಹಬೀಬ್ ಆಂಗ್ಲ ಪ್ರಾ.ಮತ್ತು ಪ್ರೌಢಶಾಲೆ ಹತ್ತಿರ, ಟಿಪ್ಪುನಗರ ಕೆಕೆ ಶೆಡ್, ಗೋಪಾಳ ರಂಗನಾಥ ಬಡಾವಣೆ ಬಿ ಬ್ಲಾಕ್ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನದ ಹತ್ತಿರ, ಶರಾವತಿ ನಗರ ಮುಖ್ಯರಸ್ತೆ ಬಿ ಬ್ಲಾಕ್ ಹಿಂದೂ ರುದ್ರಭೂಮಿ ಎದುರು.

ಭದ್ರಾವತಿ ನಗರ ಪ್ರದೇಶದ ಹುತ್ತಾ ಕಾಲೋನಿ ಈ ಎಲ್ಲಾ ಸ್ಥಳಗಳಲ್ಲಿ ಹೊಸದಾಗಿ ನ್ಯಾಯಬೆಲೆ  ಅಂಗಡಿ ತೆರೆಯಲು ಆಗಸ್ಟ್-15 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ, ನಾಗರೀಕ ಸರಬರಾಜು  ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *