ಶಿವಮೊಗ್ಗ, ಜು. 23: ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ 24/07/2023 ರ ಸೋಮವಾರದಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಭಾನುವಾರ ಸಂಜೆ ಪ್ರಕಟಣೆ ಹೊರಡಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

