ಶಿವಮೊಗ್ಗ, ಆ. 10: ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಹೊಸದಾಗಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ನಿರ್ಮಿಸಲಾಗುತ್ತಿದ್ದು, ಟ್ಯಾಪಿಂಗ್ ಗೋಪುರದ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಈ ಕೆಳಕಂಡ ಗ್ರಾಮಗಳಲ್ಲಿ 11-08-2023 ಮತ್ತು 12-08-2023 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಗ್ರಾಮಗಳ ವಿವರ: ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೊಸೂರು, ಹೊರಬೈಲು ಸುತ್ತಮುತ್ತ ಗ್ರಾಮಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ,
ಮಲ್ಲಾಪುರ, ರಟ್ಟೆಹಳ್ಳಿ, ಸುತ್ತುಕೋಟೆ ಸುತ್ತಮುತ್ತ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

