ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ

ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ

ಶಿವಮೊಗ್ಗ, ಆ. 11: ಭಾರತ ಸರ್ಕಾರದ ಗೃಹ ಮಂತ್ರಾಲಯದ ಆದೇಶದ ಅನುಸಾರ, ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರ ಧ್ವಜ ಬಳಕೆ ನಿಷೇಧಿಸಲಾಗಿದೆ ಎಂದು ಕರ್ನಾಟ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ರಾಷ್ಟ್ರೀಯ ಗೌರವ ಕಾಯ್ದೆ 1971 ಮತ್ತು ಭಾರತ ಧ್ವಜ ಸಂಹಿತೆ 2002 ರ ಅಡಿ ಈ ಆದೇಶ ಹೊರಡಿಸಲಾಗಿದೆ. ಎಲ್ಲಾ  ಸರ್ಕಾರಿ, ಖಾಸಗಿ ಸಂಸ್ಥೆಗಳು ಹಾಗೂ ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳು

ಹಾಗೂ ಸ್ವಾತಂತ್ರ್ಯ ದಿನಾಚರಣೆಯಂದು ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಕರ್ನಾಟ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶಿಲ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →