ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್’ಗೆ ಶಾಸಕ ಎಸ್.ರುದ್ರೇಗೌಡ ಅಭಿನಂದನೆ

ಶಿವಮೊಗ್ಗ, ಫೆ. 2: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್, ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ರುದ್ರೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸರ್ವರಿಗೂ ಸಮಭಾವ – ಸಮಬಾಳ್ವೆ, ಮಹಿಳೆಯರು, ವೃದ್ಧರು, ಉದ್ಯಮಿಗಳು, ನೌಕರರು, ಉದ್ಯೋಗಿಗಳು, ರೈತರು, ಮೀನುಗಾರರು ಎಲ್ಲರಿಗೂ ಕೇಂದ್ರ ಬಜೆಟ್‌ನಲ್ಲಿ ಕೊಡುಗೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷವಾಗಿ ಬಜೆಟ್ ನಲ್ಲಿ ಕರ್ನಾಟಕ ರಾಜ್ಯದ ಪ್ರಮುಖ ಭದ್ರಾ ಮೇಲ್ದಂಡೆ ಯೋಜನೆಗೆ 5,300  ಕೋಟಿ ರೂ. ಅನುದಾನವನ್ನು ರೈತರ ಪರವಾಗಿ ಮೀಸಲಿಟ್ಟಿರುವುದು ಅಭಿನಂದನೀಯ ಎಂದು ಹೇಳಿದ್ದಾರೆ

ಜನಸ್ನೇಹಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಸಮಸ್ತ ಕರ್ನಾಟಕ ಜನತೆಯ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ಎಸ್.ರುದ್ರೇಗೌಡ ಅವರು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *