ಶಿವಮೊಗ್ಗ ನಗರದ ವಿವಿಧೆಡೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಶಿವಮೊಗ್ಗದ ನಗರದ ವಿವಿಧೆಡೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತರೆಯಲು ಅರ್ಜಿ ಆಹ್ವಾನ

 ಶಿವಮೊಗ್ಗ, ಸೆ. 2: ಶಿವಮೊಗ್ಗ ಅನೌಪಚಾರಿಕ ಪಡಿತರ ಪ್ರದೇಶ ವ್ಯಾಪ್ತಿಯಲ್ಲಿ, ಹೊಸದಾಗಿ ಮೂರು ನ್ಯಾಯಬೆಲೆ ಅಂಗಡಿ ತೆರೆಯಲು ಆಹಾರ ಇಲಾಖೆಯು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಸೂಳೇಬೈಲು ಮುಖ್ಯರಸ್ತೆಯ ಮತ್ತೂರು ಸೊಸೈಟಿ ಕಟ್ಟಡದ ಅಕ್ಕ-ಪಕ್ಕ, ಮತ್ತೂರು ಸೂಳೇಬೈಲು ರಸ್ತೆಯ ಇಂದಿರಾನಗರ ಅರಳಿಕಟ್ಟೆ ರಸ್ತೆಯ ಅಕ್ಕ-ಪಕ್ಕ ಹಾಗೂ ಗೋಪಾಳ ಮುಖ್ಯರಸ್ತೆಯ ದ್ರೌಪದಮ್ಮ ಸರ್ಕಲ್‍ನ ವಿಜಯನಗರದ ಎಡಭಾಗ ಸ್ಥಳಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ಆಸಕ್ತ ಅರ್ಹರು ಶಿವಮೊಗ್ಗ ಅನೌಪಚಾರಿಕ ಪಡಿತರ ಪ್ರದೇಶ ಅಥವಾ ಉಪನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.30 ರೊಳಗಾಗಿ ಸಲ್ಲಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *