ಶಿವಮೊಗ್ಗ : ಮಾಚೇನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಫೆ.6 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಫೆ. 5 ನಗರದ ಎಂ.ಆರ್.ಎಸ್ 220 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬೇಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-2, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18,   ಎಂಸಿಎಫ್-20  ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಫೆ.06 ರ ಬೆಳಿಗ್ಗೆ 9:30 ರಿಂದ ಸಂಜೆ 5:30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, 

ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →