ಸ್ಮಶಾನ – ಖಬರಸ್ಥಾನಗಳಿಗೆ 3 ತಿಂಗಳೊಳಗೆ ಜಾಗ ಒದಗಿಸಿ : ಡಿಸಿ – ಸಿಇಒಗಳಿಗೆ ಸಿಎಂ ಸೂಚನೆ

ಬೆಂಗಳೂರು ಸೆ. 13 : ರಾಜ್ಯದಲ್ಲಿರುವ ಸ್ಮಶಾನ ಮತ್ತು‌ ಖಬರ್ ಸ್ಥಾನಗಳಿಗೆ ಮೂರು ತಿಂಗಳಲ್ಲಿ ಜಾಗ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. 

ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನದ ಡಿಸಿ ಮತ್ತು ಸಿಇಒ ಗಳ ಸಭೆಯಲ್ಲಿ ಈ ಸೂಚನೆ ನೀಡಿದರು. 

ರಾಜ್ಯದಲ್ಲಿ ಯಾವುದೇ ಧರ್ಮ ಮತ್ತು ಜಾತಿಯವರು ಸ್ಮಶಾನ ಅಥವಾ ಖಬರ್ ಸ್ಥಾನಗಳಿಗೆ ಜಾಗ ಒದಗಿಸುವಂತೆ ಕೋರಿದ್ದರೆ ಅದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು. ಸರ್ಕಾರಿ ಜಾಗವನ್ನು ಒದಗಿಸಿ ಕೊಡಬೇಕು. ಸರ್ಕಾರಿ ಜಾಗ ಲಭ್ಯವಿಲ್ಲದಿದ್ದರೆ ಖಾಸಗಿಯವರಿಂದ ಜಾಗ ಖರೀದಿಸಿ ಸಾರ್ವಜನಿಕ‌ ಸ್ಮಶಾನ ಮತ್ತು‌ ಖಬರ್ ಸ್ಥಾನಗಳಿಗೆ ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.‌

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ

ಅಲ್ಪಸಂಖ್ಯಾತರ ವಸತಿ ಶಾಲೆಗಳ ಉನ್ನತೀಕರಣ ಹಾಗೂ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜು ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಿಗೆ 65 ಕಡೆಗಳಲ್ಲಿ ನಿವೇಶನ ಒದಗಿಸಲು ಹಾಗೂ ನಾಲ್ಕು ಕಡೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ವಕ್ಫ್‌ ಆಸ್ತಿ ಸಂರಕ್ಷಣೆಗೆ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇರುವ 400 ಒತ್ತುವರಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ ಒತ್ತುವರಿ ತೆರವು ಗೊಳಿಸಲು ಸೂಚಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *