ರಾಜ್ಯದ 195 ತಾಲೂಕುಗಳು ಬರ ಪೀಡಿತ – ಪರಿಹಾರಕ್ಕೆ ಕೇಂದ್ರಕ್ಕೆ ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ 195 ತಾಲೂಕುಗಳು ಬರ ಪೀಡಿತ - ಪರಿಹಾರಕ್ಕೆ ಕೇಂದ್ರಕ್ಕೆ ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆ. 14: ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕಳ್ಳಭಟ್ಟಿಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆಗೆ ಸಿಎಂ ಸೂಚನೆ

ಬೆಂಗಳೂರು ಸೆ 13: ಕಳ್ಳಭಟ್ಟಿಗೆ ಕಡಿವಾಣ ಹಾಕಿ, ಅಕ್ರಮ ಮದ್ಯ ನುಸುಳುವಿಕೆ ತಪ್ಪಿಸಿ, ಬಾಕಿ ತೆರಿಗೆ ವಸೂಲಿ ಮಾಡಿ ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿ ಸಾಧಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆಯಲಗಲಿ ಈ ಸೂಚನೆ ನೀಡಿದರು. 

ಇಲಾಖೆಯ ಪ್ರಸಕ್ತ ವರ್ಷದ ರಾಜಸ್ವ ಸಂಗ್ರಹ ಗುರಿ 36,000 ಕೋಟಿ ಇದ್ದು, ತೆರಿಗೆ ಸಂಗ್ರಹದ ಬೆಳವಣಿಗೆ ದರ 5.31% ರಷ್ಟಿದೆ. ನಿಗದಿತ ಗುರಿ ಸಾಧನೆಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. 

ರಾಜ್ಯದ ಗಡಿ ಭಾಗಗಳಲ್ಲಿ, ವಿಶೇಷವಾಗಿ ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಣಿಕೆ ಕುರಿತು ಜಾರಿ ದಳದವರು ಹೆಚ್ಚಿನ ನಿಗಾ ವಹಿಸಬೇಕು. ಕಳ್ಳಭಟ್ಟಿ ಮದ್ಯ ತಯಾರಿಕೆ, ಮಾರಾಟದಿಂದ ಬಡವರ ಆದಾಯ ಮತ್ತು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರಿಂದ ಕಳ್ಳಭಟ್ಟಿ ಮದ್ಯ ತಯಾರಿಕೆ ಮತ್ತು ಮಾರಾಟವನ್ನು ಮಟ್ಟಹಾಕುವಂತೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಸೂಚಿಸಿದರು.

ಎಲ್ಲ ಕಡೆ ಜಾಗೃತದಳ ಕಟ್ಟೆಚ್ಚರ ವಹಿಸಬೇಕು. ಎಲ್ಲ ಉಪ ಆಯುಕ್ತರು ರಾಜಸ್ವ ಸಂಗ್ರಹ ಹೆಚ್ಚಳಕ್ಕೆ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಹಳೆ ಬಾಕಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು.  ಅಬಕಾರಿ ಇಲಾಖೆಯಲ್ಲಿ ಸುಧಾರಣಾ ಕ್ರಮಗಳ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು.

ಗಡಿ ಭಾಗಗಳ ಚೆಕ್‌ಪೋಸ್ಟಿನಲ್ಲಿ ಹೋಂ ಗಾರ್ಡ್‌ಗಳ ಸೇವೆ ಪಡೆದುಕೊಂಡು, ಇನ್ನಷ್ಟು ಬಲ ಪಡಿಸಲು ಹಾಗೂ ಇತರ ಸೌಲಭ್ಯಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು, ಅಬಕಾರಿ ಆಯುಕ್ತ ರವಿಶಂಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *