ಬಿಜೆಪಿ ಜೊತೆ ಮೈತ್ರಿ : ಜೆಡಿಎಸ್ ಪಕ್ಷದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ!

ಬಿಜೆಪಿ ಜೊತೆ ಮೈತ್ರಿ : ಜೆಡಿಎಸ್ ಪಕ್ಷದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ!

ಚಾಮರಾಜನಗರ, ಸೆ. 27: ಜಾತ್ಯಾತೀತ ಎಂದು ಹೇಳಿಕೊಳ್ಳುವ  ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಸರ್ಕಾರಿ ಬುಡಕಟ್ಟು ಆಶ್ರಮ ಶಾಲೆ ಕೋಣನಕೆರೆ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಜೆಡಿಎಸ್ , ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ನ್ನು ಏನೆಂದು ಕರೆಯಬೇಕು. ಜೆಡಿಎಸ್ –  ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದರು.

2004 ರಲ್ಲಿ ಸಿದ್ದರಾಮಯ್ಯರವರು ಬಿಜೆಪಿಯ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದರೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಅದ್ವಾನಿಯವರು ಹಿಂದೆ ಜನತಾ ಪಕ್ಷದಲ್ಲಿದ್ದಾಗ ಅವರನ್ನು ಭೇಟಿ ಮಾಡಿದ್ದು ನಿಜ ಎಂದು ತಿಳಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *