ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ : ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜನೆ

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ : ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜನೆ

ಬೆಂಗಳೂರು, ಅ. 4 : “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಹೆಸರಿನಲ್ಲಿ 01 ನವೆಂಬರ್ 2023 ರಿಂದ 01 ನವೆಂಬರ್ 2024 ರವರೆಗೆ ಕರ್ನಾಟಕ ಸಂಭ್ರಮ  ಆಚರಿಸಲು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. 

ಕರ್ನಾಟಕ ಎಂದು ನಾಮಕರಣ ಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ *ಕರ್ನಾಟಕ ಸಂಭ್ರಮ* ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಲು  ಇಂದು ಅವರ ಅಧ್ಯಕ್ಷತೆಯಲ್ಲಿ  ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. 

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ : ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜನೆ

ಕಾರ್ಯಕ್ರಮದಲ್ಲಿ ದೇಶೀ ಕ್ರೀಡೆಗಳನ್ನು ಹಮ್ಮಿಕೊಳ್ಳುವುದು, ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ವು ಬಿಂಬಿಸಬೇಕು, ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೂ ದಾಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಮುಖ್ಯ ಮಂತ್ರಿಗಳು ಸೂಚಿಸಿದರು. 

ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು. 

ಸ್ಮಾರಕ ಅಭಿವೃದ್ಧಿ, ಜೀರ್ಣೋದ್ಧಾರ : ವಿಧಾನಸೌಧ ಹಾಗೂ ಶಾಸಕರ ಭವನದ ಮಧ್ಯೆ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸುವುದು, ಮೈಸೂರಿನಲ್ಲಿ ದೇವರಾಜ ಅರಸರ ಪ್ರತಿಮೆ ಸ್ಥಾಪನೆ, ಧಾರವಾಡದ ದಿ: ಅದರಗುಂಚಿ ಶಂಕರಗೌಡ , ಬಳ್ಳಾರಿಯ ಹುತಾತ್ಮ ರಂಜಾನ್ ಸಾಬ್ ಹಾಗೂ ಗದಗ ಜಿಲ್ಲೆಯ ದಿ: ಅಂದಾನಪ್ಪ ದೊಡ್ಡಮೇಟಿ ಅವರ  ಸ್ಮಾರಕ ಅಭಿವೃದ್ಧಿ , ಜೀರ್ಣೋದ್ಧಾರ ಕಾರ್ಯ ಹಮ್ಮಿಕೊಳ್ಳುವುದು ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳನ್ನು ರೂಪಿಸಲು  ತೀರ್ಮಾನಿಸಲಾಯಿತು.

ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ : ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ, ಲೇಸರ್ ಶೋ/ ಧ್ವನಿ, ಬೆಳಕು ಕಾರ್ಯಕ್ರಮ, ಕರ್ನಾಟಕಕ್ಕೆ ಕೊಡುಗೆ ನೀಡಿದ 50 ಮಹಿಳೆಯರಿಗೆ  ಪ್ರಶಸ್ತಿ ನೀಡುವುದು ಹಾಗೂ  ನವೆಂಬರ್ 2024 ಕ್ಕೆ ಸಮಾರೋಪ ಸಮಾರಂಭ ಕಾರ್ಯಕ್ರಮ ಆಯೋಜಿಸುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. 

ಲಾಂಛನ: ಕರ್ನಾಟಕ ಸಂಭ್ರಮ – 50 ಕಾರ್ಯಕ್ರಮದ ಲಾಂಛನವನ್ನು  ಅಕ್ಟೋಬರ್ 17  ರಂದು   ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಯಿತು. 

ಹಿಂದಿನ ಸರ್ಕಾರದ ನಿರ್ಲಕ್ಷ್ಯಕ್ಕೆ ಸಿಎಂ ಅಸಮಾಧಾನ!

ಕರ್ನಾಟಕ ಎಂದು ನಾಮಕರಣ ಗೊಂಡು 50ನೇ  ವರ್ಷವನ್ನು ಹಿಂದಿನ ಸರ್ಕಾರ ವೈಭವದಿಂದ ಆಚರಿಸಬೇಕಿತ್ತು. ಅಂದರೆ 1-11-2022 ರಿಂದ 1-11-2023ರ ವರೆಗೆ ಆಚರಿಸಬೇಕಿತ್ತು. ಹಿಂದಿನ ಸರ್ಕಾರ ಏಕೆ ಆಚರಿಸಲಿಲ್ಲ ? ಈ ನಿರ್ಲಕ್ಷ್ಯ ಸರಿನಾ ? ಎಂದು ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು. ಈಗ 50 ವರ್ಷ ತುಂಬಿ 51ನೇ  ವರ್ಷಕ್ಕೆ ಕಾಲಿಡಲಿದ್ದು, 50 ನೇ ವರ್ಷ ನವೆಂಬರ್ 2022 ರಂದೇ ಆಚರಿಸಬೇಕಿತ್ತು. ಹಿಂದಿನ ಸರ್ಕಾರ ಈ ವಿಚಾರದಲ್ಲಿ ಎಡವಿದೆ. 50 ವರ್ಷ ತುಂಬಿದ ನಂತರ ಮಾಡಲು ಹೊರಟರೆ ಅದಕ್ಕೆ ಮಹತ್ವವಿರುತ್ತದೆಯೇ ಪ್ರಶ್ನಿಸಿದ ಮುಖ್ಯ ಮಂತ್ರಿಗಳು, ಕೊನೆಗೆ 1-11-2023 ರಿಂದ 1-11-2024 ರ ವರೆಗೆ ಅರ್ಥಪೂರ್ಣವಾಗಿ ಆಚರಿಸಿ ಎನ್ನುವ ತೀರ್ಮಾನ ತೆಗೆದುಕೊಂಡರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *