ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೆಯ ಬಾರಿಗೆ  ಕುವೆಂಪು ವಿವಿ ಪ್ರಾಧ್ಯಾಪಕರು! 

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೆಯ ಬಾರಿಗೆ ಕುವೆಂಪು ವಿವಿ ಪ್ರಾಧ್ಯಾಪಕರು!

ಶಿವಮೊಗ್ಗ, ಅ. 5: ಅಮೇರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ. ಜೆ. ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಸತತ ಮೂರನೇಯ ವರ್ಷ ಸ್ಥಾನ ಪಡೆದಿದ್ದಾರೆ.

ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟಾನ್‌ಫೋರ್ಡ್ ವಿವಿಯ ಜಾನ್ ಅಯೋನ್ನಿಡಿಸ್ ಅಕ್ಟೋಬರ್ 04ರಂದು ಬಿಡುಗಡೆ ಮಾಡಿರುವ ವಿಶ್ವದ ಅಗ್ರ ಶೇ. 02ರ ಶ್ರೇಷ್ಠ ವಿಜ್ಞಾನಿಗಳ ಡೇಟಾಬೇಸ್‌ನಲ್ಲಿ ವಿವಿಯ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದು, ವಿವರಗಳು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ.  

2018 ರಲ್ಲಿ ಪ್ರಾರಂಭವಾದ ಈ ರ‍್ಯಾಂಕಿಂಗ್ ಪಟ್ಟಿ, ಈಗ ಆರನೇ ವರ್ಷಕ್ಕೆ ಕಾಲಿರಿಸಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಗತ್ತಿನ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವನ್ನು ಪ್ರಕಟಿಸಲಾಗಿದೆ.

ಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 174 ಉಪ ವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿರುವುದಾಗಿದ್ದು, ವೃತ್ತಿ ಜೀವಮಾನದ ಸಾಧಕರು ಮತ್ತು 2023ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳಲ್ಲಿ ಪ್ರಕಟಿಸಲಾಗಿದೆ. 

2023ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 40,686ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣ ತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಷಯಗಳನ್ನು ಕುರಿತು ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಸತತ ಆರನೇ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧನೆಯನ್ನು ಮಾಡಿದ್ದಾರೆ. 

ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಬಿ. ಇ. ಕುಮಾರಸ್ವಾಮಿ 1,79,264 ನೇ ಸ್ಥಾನದಲ್ಲಿದ್ದು, ಸತತ ಮೂರನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ. ಈ ವರ್ಷದ ಪಟ್ಟಿಯಲ್ಲಿ ಭಾರತದ ವಿವಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2000 ಕ್ಕೂ ಅಧಿಕ ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ. ಇಬ್ಬರೂ ಪ್ರಾಧ್ಯಾಪಕರು ಜೀವಮಾನದ ಪಟ್ಟಿಯಲ್ಲಿ ಕೂಡ ಸ್ಥಾನ ಪಡೆದಿರುವುದು ಗಮನಾರ್ಹ.

ಸ್ಟಾನ್‌ಫೋರ್ಡ್ ವಿವಿಯ ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಈ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ಇದು ವಿಶ್ವವಿದ್ಯಾಲಯದ ಅಧ್ಯಾಪಕರ ಶೈಕ್ಷಣ ಕ ಗುಣಮಟ್ಟ ಮತ್ತು ಸಂಶೋಧನಾ ಚಟುವಟಿಕೆಗಳ ಸ್ಥಿರತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಪ್ರಭಾರ ಕುಲಪತಿ ಪ್ರೊ. ಎಸ್. ವೆಂಕಟೇಶ್ ಪ್ರತಿಕ್ರಿಯಿಸಿದ್ದಾರೆ. 

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *