ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಶಿವಮೊಗ್ಗದ ಡಾ.ಆರ್‌.ಎಸ್‌.ವರುಣ್‌ ಕುಮಾರ್‌

ಶಿವಮೊಗ್ಗ, ಅ. 5: ವಿಶ್ವದ  ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕಾದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾನಿಲಯ ಸಿದ್ದಪಡಿಸಿದ ಪಟ್ಟಿಯಲ್ಲಿ ಶಿವಮೊಗ್ಗದ ರಾಮನಹಳ್ಳಿಯ  ಡಾ.ಆರ್‌.ಎಸ್‌. ವರುಣ್‌ಕುಮಾರ್‌ ಸ್ಥಾನ ಪಡೆದಿದ್ದಾರೆ.

ದಾವಣಗೆರೆ ವಿವಿಯ ಪ್ರೊ. ಬಿ.ಸಿ ಪ್ರಸನ್ನ ಕುಮಾರ ಅವರ ಮಾರ್ಗದರ್ಶನದಲ್ಲಿ ಸಂಶೋಧನಾರ್ಥಿಯಾದ ಡಾ.ಆರ್‌.ಎಸ್‌.ವರುಣ್‌ಕುಮಾರ್‌ ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾನಿಲಯವು ತಯಾರಿಸಿದ 202೨ ರವರೆಗಿನ ಜಾಗತಿಕ ಮಟ್ಟದ ಅತ್ಯುನ್ನತ ಶೇ. 2 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ  ಹೆಚ್-ಇಂಡೆಕ್ಸ್, ಐ-ಟೆನ್ ಇಂಡೆಕ್ಸ್ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪತ್ರಕರ್ತರು, ಲೇಖಕರಾದ  ಎನ್‌.ರವಿಕುಮಾರ್‌ (ಟೆಲೆಕ್ಸ್‌ ರವಿ) ಮತ್ತು ಶಶಿಕಲಾ ದಂಪತಿಯ ಪುತ್ರರಾದ ಡಾ.ಆರ್‌.ಎಸ್‌.ವರುಣ್‌ಕುಮಾರ್‌ ಗಣಿತಶಾಸ್ತ್ರದ ಶಾಖ ಮತ್ತು ಸಮೂಹ ವರ್ಗಾವಣೆ, ದ್ರವಚನ ಶಾಸ್ತ್ರ ವಿಷಯಗಳಲ್ಲಿ ಸಂಶೋಧನೆಯಲ್ಲಿ ತೊಡಗಿದ್ದಾರೆ. 

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *