ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ : ಶೇ 3.75 ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರದ ಆದೇಶ

ಬೆಂಗಳೂರು, ಆ. 21: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ. 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.

UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *