ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅ. 23 : ತಮ್ಮ ಹಿಂದಿನ ಸರ್ಕಾರವನ್ನು  ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ , ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ತಿಳಿಸಿದರು.

ಅವರು ಇಂದು ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರಿಗೆ ಮಾತನಾಡಿದರು.

ನಾಳೆ ನಡೆಯಲಿರುವ ಚಾಮುಂಡೇಶ್ವರಿ ದೇವಿ ಮೆರವಣಿಗೆ, ನಂದಿಕಂಬದ ಪೂಜೆ, ಪಂಜಿನ ಮೆರವಣಿಗೆ ಸೇರಿದಂತೆ ದಸರಾ ಮಹೋತ್ಸವದಲ್ಲಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಭಾಗವಹಿಸಲಿದ್ದೇನೆ ಎಂದರು.

ಮುಖ್ಯಮಂತ್ರಿಯವರು ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಲಾಗಿತ್ತು. ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ವಸತಿಗೃಹವನ್ನು ಹಿಂದಿರುಗಿಸಿಲ್ಲ ಎಂಬ ಅವರ ಟೀಕೆಗೆ ಉತ್ತರಿಸುತ್ತಾ, ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ  ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *