ಲೈಂಗಿಕ ದೌರ್ಜನ್ಯದಿಂದ ಬಾಲಕಿ ಆತ್ಮಹತ್ಯೆ ಪ್ರಕರಣ : 23 ರ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!

ಶಿವಮೊಗ್ಗ, ನ. 5: ಲೈಂಗಿಕ ದೌರ್ಜನ್ಯ ಎಸಗಿ ಅಪ್ರಾಪ್ತ ವಯಸ್ಸಿನ  ಯುವತಿ ಆತ್ಮಹತ್ಯೆಗೆ ಕಾರಣಕರ್ತನಾದ ಯುವಕನಿಗೆ, 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ಕೋರ್ಟ್ (ಎಫ್.ಟಿ.ಎಸ್.ಸಿ – 1) ತೀರ್ಪು ನೀಡಿದೆ.

23 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವನಾಗಿದ್ದಾನೆ. ಶಿಕ್ಷೆಯ ಜೊತೆಗೆ 1.25 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.

ನ್ಯಾಯಾಧೀಶರಾದ ಲತಾ ಅವರು ನ. 4 ರಂದು ಈ ತೀರ್ಪು ನೀಡಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಹಾಗೂ ಮಮತ ಅವರು ವಾದ ಮಂಡಿಸಿದ್ದರು.

ಘಟನೆ ಹಿನ್ನೆಲೆ: 2020 ನೇ ಸಾಲಿನಲ್ಲಿ ಸದರಿ ಘಟನೆ ನಡೆದಿತ್ತು. ತೀರ್ಥಹಳ್ಳಿ ತಾಲೂಕು ಮೂಲದ ಯುವಕನ ಲೈಂಗಿಕ ದೌರ್ಜನ್ಯದಿಂದ ಬೇಸತ್ತು, 16 ವರ್ಷದ ಯುವತಿಯು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಸಂಬಂಧ ಮೃತ ಬಾಲಕಿಯ ತಂದೆಯು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಕುರಿತಂತೆ ಹೊಸನಗರ ಸರ್ಕಲ್ ಇನ್ಸ್’ಪೆಕ್ಟರ್ ಆಗಿದ್ದ ಬಿ.ಸಿ.ಗಿರೀಶ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ಯುವಕನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (ಚಾರ್ಜ್ ಶೀಟ್) ದಾಖಲಿಸಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *