ಕರ್ನಾಟಕ ಹಾಲು ಮಹಾಮಂಡಳಿಯಿಂದ ಕ್ವಿಂಟಾಲ್‍ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ

2250 per quintal. Maize purchase at price ಶಿವಮೊಗ್ಗ ದಕ್ಷಿಣ ಕನ್ನಡ ದಾವಣಗೆರೆ ಜಿ‍ಲ್ಲೆಗಳ ವ್ಯಾಪ್ತಿಯ ರೈತರ ಗಮನಕ್ಕೆ ಕರ್ನಾಟಕ ಹಾಲು ಮಹಾಮಂಡಳಿಯಿಂದ ಕ್ವಿಂಟಾಲ್ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ

ಶಿವಮೊಗ್ಗ, ನ. 13:  ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಖರೀದಿಸಲು ನಿರ್ಧರಿಸಿದೆ.

ಪ್ರತಿ ಕ್ವಿಂಟಾಲ್‍ಗೆ 2250 ರೂ. ದರದಲ್ಲಿ ಖರೀದಿಸಲಾಗುತ್ತಿದೆ. ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿಯನ್ನು ನೀಡಿ, ಫ್ರೂಟ್ಸ್ (FRUTTS) ತಂತ್ರಾಂಶದಲ್ಲಿ ನೊಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೊಂದಾಯಿಸಿಕೊಳ್ಳಬಹುದಾಗಿದೆ. 

ಶಿಕಾರಿಪುರ ಪಶು ಆಹಾರ ಘಟಕಕ್ಕೆ ಅವಶ್ಯವಿರುವ 30000 ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಪ್ರದೇಶದ ರೈತರುಗಳಿಂದ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರ ಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ಧಪಡಿಸಿರುವ ಫ್ರೂಟ್ಸ್ ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.

ಪ್ರತಿ ಒಬ್ಬ ರೈತರಿಂದ ಗರಿಷ್ಠ100 ಕ್ವಿಂಟಾಲ್‍ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ಮಧ್ಯವರ್ತಿಗಳಿಗೆ ಅವಕಾಶ ಇರುವುದಿಲ್ಲ. ರೈತರೇ ನೇರವಾಗಿ ಉತ್ತಮ ಗುಣಮಟ್ಟದ ಮೆಕ್ಕೆಜೋಳವನ್ನು ತಲಾ ಐವತ್ತು ಕೆ.ಜಿ ತೂಕದಂತೆ ಗೋಣಿ ಚೀಲಗಳಲ್ಲಿ ಸರಬರಾಜು ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 96060-12571 ಮತ್ತು ಇಮೇಲ್ ವಿಳಾಸ : kmfcfps@gmail.com ನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ಪಶು ಆಹಾರ ಘಟಕದ ಪ್ರಕಟಣೆ ತಿಳಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *