ಪೊಲೀಸರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ ನಿರಂತರ ಸಂಸ್ಥೆಯ ಸದಸ್ಯರು

Diwali festival celebration by nirantara team with police ಪೊಲೀಸರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ ನಿರಂತರ ಸಂಸ್ಥೆಯ ಸದಸ್ಯರು

ಶಿವಮೊಗ್ಗ, ನ. 13: ಶಿವಮೊಗ್ಗ ನಗರದಲ್ಲಿ ಸೋಮವಾರ ನಿರಂತರ ಸಂಸ್ಥೆಯು ಪೊಲೀಸರೊಂದಿಗೆ ದೀಪಾವಳಿ ಹಬ್ಬ ಆಚರಣೆ ಮಾಡಿತು.

ದೊಡ್ಡಪೇಟೆ ಪೊಲೀಸ್ ಠಾಣೆ ಆವರಣದಲ್ಲಿರುವ, ಪಶ್ಚಿಮ ಸಂಚಾರಿ ಠಾಣೆ ಅಧಿಕಾರಿ – ಸಿಬ್ಬಂದಿಗಳೊಂದಿಗೆ ಸಂಸ್ಥೆಯ ಸದಸ್ಯರು ದೀಪ ಬೆಳಗಿಸಿ ಹಬ್ಬ ಆಚರಿಸಿದರು.

‘ಹಬ್ಬಗಳ ವೇಳೆ ಕುಟುಂಬ ಸದಸ್ಯರೆಲ್ಲ ಒಟ್ಟಿಗೆ ಸೇರಿ ಆಚರಿಸುತ್ತೆವೆ. ಆದರೆ ಇದೆ ಹಬ್ಬಗಳ ಸಂದರ್ಭಗಳಲ್ಲಿ, ಪೊಲೀಸರು ನಮ್ಮನ್ನ ಕಾಯುತ್ತಾ ಕರ್ತವ್ಯ ನಿರತರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗಳೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು’ ಎಂದು ನಿರಂತರ ಸಂಸ್ಥೆ ತಿಳಿಸಿದೆ.

ಈ ಸಂದರ್ಭದಲ್ಲಿ ನಿರಂತರ ಸಂಸ್ಥೆಯ ಸಂಸ್ಥಾಪಕರಾದ ಚೈತ್ರ ಸಜ್ಜನ್, ಸದಸ್ಯರಾದ ಸರೋಜಾ, ಶುಭ, ಭುಜಂಗಪ್ಪ, ಹಾಲೇಶ್, ಸುಜಾತ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *