‘ಮಕ್ಕಳಿಗೆ ಸಂಸ್ಕಾರ ಕಲಿಸುವುದು ಅವಶ್ಯ’ – ಶಾಸಕ ಡಿ.ಎಸ್.ಅರುಣ್

ಶಿವಮೊಗ್ಗ, ಫೆ.11: ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಹಾಗೂ ಗುಣಗಳನ್ನು ಕಲಿಸಿಕೊಡುವ ಕೆಲಸ ಆಗಬೇಕು. ಸಂಸ್ಕೃತಿ ಪರಂಪರೆಯ ಅರಿವು ಮೂಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದ್ದ ಲಿಟಲ್ ಎಲಿ ಶಾಲಾ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಕ್ಕಳಿಗೆ ಮನಯೇ ಮೊದಲ ಪಾಠಶಾಲೆ ಆಗಿರುವುದರಿಂದ ಪೋಷಕರು ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕು. ಶಿಕ್ಷಣದ ಜತೆಯಲ್ಲಿ ಮನೆಗಳಲ್ಲಿ ಮಕ್ಕಳಿಗೆ ಮೌಲ್ಯಯುತ ಜೀವನ ನಡೆಸುವ ಬಗ್ಗೆ ತಿಳವಳಿಕೆ ಮೂಡಿಸಬೇಕು. ಬಾಲ್ಯದಿಂದಲೇ ಮಕ್ಕಳಿಗೆ ಮೌಲ್ಯಗಳನ್ನು ಕಲಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದ್ದು, ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಆಗುತ್ತಿದೆ. ಮಕ್ಕಳಿಗೆ ಯುವಪೀಳಿಗೆಗೆ ಅವಶ್ಯವಿರುವ ಕೆಲಸಗಳು ಆಗುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಶಿವಮೊಗ್ಗ ಪ್ರಮುಖವಾಗಿ ಗುರುತಿಸಿಕೊಳ್ಳಲಿದೆ. ಎಲ್ಲರೂ ಉತ್ತಮ ಸಾಧನೆ ಮಾಡಬೇಕು ಎಂದರು.

ವಿದೇಶಿ ಸಂಸ್ಕೃತಿ, ಪಾಶ್ಚಾತ್ಯ ಶೈಲಿಯ ಅನುಕರಣೆ ಮಾಡುವುದು ಬೇಡ, ಶಾಲಾ ಕಾರ್ಯಕ್ರಮಗಳಲ್ಲಿ ಮಕ್ಕಳಿಗೆ ನಮ್ಮ ಸಂಸ್ಕೃತಿ ಪರಂಪರೆಯ ಅರಿವು ಮೂಡಿಸುವ ರೀತಿಯಲ್ಲಿ ಚಟುವಟಿಕೆಗಳನ್ನು ಆಯೋಜಿಸಬೇಕು. ಇದರಿಂದ ಮಕ್ಕಳಿಗೆ ಸಂಸ್ಕೃತಿ ಪರಂಪರೆಯ ಪರಿಚಯವಾಗುತ್ತದೆ ಎಂದು ತಿಳಿಸಿದರು.

ವಿಠ್ಠಲ್ ಭಂಡಾರಿ ಮಾತನಾಡಿ, ಮಕ್ಕಳು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಪೋಷಕರು ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕು. ಎಲ್ಲ ಮಕ್ಕಳಿಗೂ ಒಳ್ಳೆಯದಾಗಲಿ ಎಂದು ಆಶಿಸಿದರು.

ಪ್ರತಿಭಾ ಅರುಣ್ ಮಾತನಾಡಿ, ಮಕ್ಕಳ ಕಲಿಕಾ ಸಾಮಾರ್ಥ್ಯ ಹೆಚ್ಚಿಸುವ ರೀತಿ ಶಿಕ್ಷಕರು ಉತ್ತಮವಾಗಿ ಮಕ್ಕಳಿಗೆ ಶಿಕ್ಷಣ ನೀಡಬೇಕು. ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಕೌಶಲ್ಯಗಳು ಬೆಳೆದರೆ ಜೀವನದಲ್ಲಿ ಉನ್ನತ ಸಾಧನೆ ಮಾಡುತ್ತಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಿಕ್ಷಕರಿಗೆ ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಪ್ರಮುಖರಾದ ಅನಿಲ್ ಶೆಟ್ಟಿ, ಬಿಂದು ಅನಿಲ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →