ಶಿವಮೊಗ್ಗ : ನಾಲ್ವರ ಬಂಧನ – ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

Arrest of four thieves: Seizure of valuable gold silver cash ಶಿವಮೊಗ್ಗ : ನಾಲ್ವರ ಬಂಧನ - ಲಕ್ಷಾಂತರ ರೂ. ಮೌಲ್ಯದ ಚಿನ್ನ ಬೆಳ್ಳಿ ನಗದು ವಶ

ಶಿವಮೊಗ್ಗ, ಡಿ. 20: ವಿವಿಧೆಡೆ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ನಾಲ್ವರನ್ನು ಶಿವಮೊಗ್ಗದ ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ವಶಕ್ಕೆ ಪಡೆದ ಘಟನೆ ನಡೆದಿದೆ.

ಮೈಸೂರಿನ ಪಿರಿಯಾಪಟ್ಟಣ ನಿವಾಸಿ ಸಂತೋಷ ಯಾನೆ ಎಮ್ಮೆ ಸಂತೋಷ (36), ಶಿವಮೊಗ್ಗದ ಅಶೋಕ ನಗರದ ನಿವಾಸಿಗಳಾದ ಮಹಮ್ಮದ್ ನದೀಮ್ ಯಾನೆ ನದ್ದು (30), ಇಮ್ರಾನ್ (32) ಹಾಗೂ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಸುರೇಶ್ ಕೆ (43) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಬಂಧಿತರಿಂದ 12.65 ಲಕ್ಷ ರೂ. ಮೌಲ್ಯದ 230 ಗ್ರಾಂ ತೂಕದ ಬಂಗಾರ, 72 ಸಾವಿರ ರೂ. ಮೌಲ್ಯದ 1 ಕೆಜಿ 200 ಗ್ರಾಂ ತೂಕದ ಬೆಳ್ಳಿ ಆಭರಣಗಳು, 25,140 ನಗದು, ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವೊಂದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳ ಬಂಧನದಿಂದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 5 ಸ್ವತ್ತು ಕಳವು ಪ್ರಕರಣಗಳು ಬೆಳಕಿಗೆ ಬಂದಂತಾಗಿದೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಮಂಜುನಾಥ್ ಬಿ, ಸಬ್ ಇನ್ಸ್’ಪೆಕ್ಟರ್ ಗಳಾದ ಶಿವಪ್ರಸಾದ್, ಮಂಜುನಾಥ್ ಪಿ, ರಘುವೀರ್, ಕುಮಾರ ಕೂರಗುಂದ, ದೂದ್ಯನಾಯ್ಕ್,

ಎಎಸ್ಐ ಮನೋಹರ್, ಸಿಬ್ಬಂದಿಗಳಾದ ಕಿರಣ್ ಮೊರೆ, ಅರುಣ್ ಕುಮಾರ್, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ‍್ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್, ಚೇತನ್ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *