ಗೃಹ ಲಕ್ಷ್ಮೀ ಯೋಜನೆ : ಡಿ. 27 ರಿಂದ ಡಿ. 29 ರವರೆಗೆ ಗ್ರಾಪಂ ಕಚೇರಿಗಳಲ್ಲಿ ವಿಶೇಷ ಕ್ಯಾಂಪ್ ಆಯೋಜನೆ

Gruha Lakshmi Yojana : d. 27 to d. A special camp will be organized at Gramm offices till 29th ಗೃಹ ಲಕ್ಷ್ಮೀ ಯೋಜನೆ ಸಮಸ್ಯೆಗಳ ಪರಿಹಾರಕ್ಕೆ ಡಿ. 27 ರಿಂದ ಡಿ. 29 ರವರೆಗೆ ಗ್ರಾಪಂ ಕಚೇರಿಗಳಲ್ಲಿ ವಿಶೇಷ ಕ್ಯಾಂಪ್ ಆಯೋಜನೆ

ಶಿವಮೊಗ್ಗ, ಡಿ. 26: ಮನೆಯೊಡತಿಗೆ ಮಾಸಿಕ 2000 ರೂ. ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆ ಪರಿಹರಿಸಲು, ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ  ಡಿ. 27 ರಿಂದ ಡಿ. 29 ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿಶೇಷ ಕ್ಯಾಂಪ್‍ಗಳನ್ನು ಜಿಲ್ಲಾ ಪಂಚಾಯ್ತಿ ಆಡಳಿತ ಆಯೋಜಿಸಿದೆ.

ಈ ಕ್ಯಾಂಪ್‍ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಖಾತೆ ತೆರೆಯುವುದು, ಇ-ಕೆವೈಸಿ ಅಪ್‍ಡೆಟ್ ಮಾಡುವುದು, ಗೃಹ ಲಕ್ಷ್ಮೀ ಅರ್ಜಿ ಸ್ಥಿತಿ ಪರಿಶೀಲಿಸುವುದು ಹಾಗೂ ಇದಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ.  

ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಹಾಗೂ ಕ್ಷೇತ್ರ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತಿ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *