ಲೋಕಾಯುಕ್ತ ವಿಚಾರಣೆಗೆ ಅನುಮತಿ : ವಿಳಂಬ ಸಲ್ಲದು- ಸಿಎಂ ಸೂಚನೆ

Permission for Lokayukta inquiry: No delay - Chief Minister's strict instruction ಲೋಕಾಯುಕ್ತ ವಿಚಾರಣೆಗೆ ಅನುಮತಿ : ವಿಳಂಬ ಸಲ್ಲದು - ಸಿಎಂ ಸೂಚನೆ

ಬೆಂಗಳೂರು, ಡಿ. 29 : ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತಂತೆ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಸಿದರು.

ಲೋಕಾಯುಕ್ತ ವಿಚಾರಣೆಗೆ ಅನುಮತಿ ವಿಳಂಬವಾಗಬಾರದು. ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು.

ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು. ಇದರಿಂದ ಜನತೆಗೆ ತಪ್ಪು ಸಂದೇಶ ಹೋಗಬಾರದು. ಆದ್ದರಿಂದ ತ್ವರಿತ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶಗಳನ್ನು ಕಳುಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *