ಶಿವಮೊಗ್ಗ : ಸಿನಿಮಾ ಥಿಯೇಟರ್ ಬಳಿ ನಿಲ್ಲಿಸಿದ್ದ ಲಾರಿಯಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!

Shimoga : A partially decomposed body was found in a lorry parked near a cinema! ಶಿವಮೊಗ್ಗ : ಸಿನಿಮಾ ಥಿಯೇಟರ್ ಬಳಿ ನಿಲ್ಲಿಸಿದ್ದ ಲಾರಿಯಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!

ಶಿವಮೊಗ್ಗ, ಡಿ. 30: ಶಿವಮೊಗ್ಗ ನಗರದ ವೀರಭದ್ರ  ಟಾಕೀಸ್ ಬಳಿ ನಿಲ್ಲಿಸಿದ್ದ ಈಚರ್ ಲಾರಿಯೊಂದರಲ್ಲಿ, ಸರಿಸುಮಾರು 30-40 ವರ್ಷ ವಯಸ್ಸಿನ ಪುರುಷನೋರ್ವನ ಮೃತದೇಹ ಭಾಗಶಃ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಮೃತರ ಹೆಸರು, ವಿಳಾಸ, ವಾರಸುದಾರರ ಮಾಹಿತಿ ತಿಳಿದುಬಂದಿಲ್ಲ. ಸುಮಾರು 5.3 ಅಡಿ ಎತ್ತರ, ಸಾಧಾರಣ ಮೈಕಟ್ಟು ಹೊಂದಿದ್ದು ಶವವು ಭಾಗಶಃ ಕೊಳೆತು ಹೋಗಿರುವುದರಿಂದ ಮುಖದ ಚಹರೆ ಗುರುತು ಸಿಗುತ್ತಿಲ್ಲ.

ಉಳಿದಂತೆ ಮೃತರ ಮೈಮೇಲೆ ಮಾಸಲು  ಬಣ್ಣದ ಟೀ ಶರ್ಟ್, ಕಪ್ಪು ಪ್ಯಾಂಟ್ ಧರಿಸಿರುವುದು ಕಂಡುಬಂದಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಕೋಟೆ ಪೊಲೀಸ್ ಠಾಣೆ ದೂ.ಸಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಸಬ್ ಇನ್ಸ್ ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *