ಹೊಸ ವರ್ಷದಂದೇ ಹೊಸ ಇತಿಹಾಸ ನಿರ್ಮಿಸಿದ ಇಸ್ರೋ..!

ISRO launches X-Ray polarimeter satellite ISRO made history in the new year! ಹೊಸ ವರ್ಷದಂದೇ ಹೊಸ ಇತಿಹಾಸ ನಿರ್ಮಿಸಿದ ಇಸ್ರೋ!

ಶ‍್ರೀಹರಿಕೋಟಾ (ಆಂಧ‍್ರಪ್ರದೇಶ), ಜ. 1: ಭಾರತೀಯ ಬಾಹ್ಯಾಕಾಶ ಸಂಸ್ಥೆ ISRO ಹೊಸ ವರ್ಷದ (New Year) ಮೊದಲ ದಿನವಾದ ಸೋಮವಾರ, ಹೊಸದೊಂದು ಇತಿಹಾಸ ಸೃಷ್ಟಿಸಿದೆ!

ಹೌದು. ಇಸ್ರೋ  ಸಂಸ್ಥೆಯು ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಎಕ್ಸ್’ಪೋಸ್ಯಾಟ್ (XPoSat) ಉಪಗ್ರಹ (Satellite) ವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಹೊಸ ಮೈಲುಗಲ್ಲು ಸ್ಥಾಪಿಸಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡಾವಣ ನೆಲೆಯಿಂದ ಬೆಳಿಗ್ಗೆ 9.10 ಕ್ಕೆ ಪಿಎಸ್ಎಲ್’ವಿ – ಸಿ 58 ರಾಕೆಟ್ ಮೂಲಕ, ಎಕ್ಸ್’ಪೋಸ್ಯಾಟ್ ಉಪಗ್ರಹ (satellite) ವನ್ನು ಯಶಸ್ವಿಯಾಗಿ ನಭಕ್ಕೆ ಹಾರಿಸಲಾಗಿದೆ. ಸದರಿ ಉಪಗ್ರಹವು ಕಪ್ಪುಕುಳಿ (ಬ್ಲ್ಯಾಕ್ ಹೋಲ್) ಸಹಿತ ಅಲ್ಲಿ ಹೊರಹೊಮ್ಮುವ ಕ್ಷಕಿರಣಗಳ ಮೂಲವನ್ನು ಅಧ್ಯಯನ ಮಾಡಲಿದೆ.

ಎಕ್ಸ್’ಪೋಸ್ಯಾಟ್ ಉಪಗ್ರಹದ ಜೊತೆಗೆ ಪಿಎಸ್ ಪಿಎಸ್‌ಎಲ್‌ವಿ (PSLV) ಇತರ ಹತ್ತು ಉಪಗ್ರಹ ( ಗಳನ್ನು ಕೂಡ ಹೊತ್ತೊಯ್ದಿದೆ. ಈ ಉಪಗ್ರಹಗಳನ್ನು ಸ್ಟಾರ್ಟ್‌ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ನಿರ್ಮಾಣ ಮಾಡಿವೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *