ಸಂಘ-ಸಂಸ್ಥೆಗಳ ಜಾಹೀರಾತು ಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯ

60% Kannada is mandatory in advertisement boards of associationsಸಂಘ-ಸಂಸ್ಥೆಗಳ ಜಾಹೀರಾತು ಫಲಕಗಳಲ್ಲಿ ಶೇ.60% ಕನ್ನಡ ಕಡ್ಡಾಯ*

ಶಿವಮೊಗ್ಗ, ಜ. 6:  ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳು ಕನಿಷ್ಠ ಶೇ.60 ರಷ್ಟು ಕಡ್ಡಾಯವಾಗಿ ಕರ್ನಾಟಕದ ಆಡಳಿತ ಭಾಷೆಯಾದ ಕನ್ನಡದಲ್ಲಿ ಇರುವಂತೆ ನಾಮಫಲಕಗಳನ್ನು ಅಳವಡಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರು ಸೂಚಿಸಿರುತ್ತಾರೆ.

ಯಾವುದೇ ದ್ವಿಭಾಷಾ ಅಥವಾ ಬಹುಭಾಷಾ ಫಲಕಗಳು ಇದ್ದಲ್ಲಿ ಗರಿಷ್ಠ ಪ್ರಮಾಣ ಶೇ. 60 ರಷ್ಟು ಕನ್ನಡದಲ್ಲಿಯೇ ಅಳವಡಿಸಿಕೊಳ್ಳಲು ಎಲ್ಲಾ ಅಂಗಡಿ ಮಾಲೀಕರುಗಳು ಕೂಡಲೇ ಕ್ರಮ ಕೈಗೊಳ್ಳುವುದು.

ಕನ್ನಡ ಫಲಕಗಳನ್ನು ಪ್ರದರ್ಶಿಸಲು 15 ದಿನಗಳಲ್ಲಿ ಕ್ರಮವಹಿಸದೇ ಇದ್ದಲ್ಲಿ ಪಾಲಿಕೆಯ ಆರೋಗ್ಯ ವಿಭಾಗದಿಂದ ಜಂಟಿ ಸರ್ವೆಗಳನ್ನು ನಡೆಸಿ ಪ್ರತ್ಯೇಕವಾಗಿ ನಿಯಮಾನುಸಾರ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳನ್ನು ಅಳವಡಿಸದೇ ಇರುವಂತಹ ಅಂಗಡಿಯ ಮಾಲೀಕರುಗಳಿಗೆ ಅಥವಾ ಸಂಬಂಧಪಟ್ಟಂತ ನಿಯಮ ಉಲ್ಲಂಘನೆ ಮಾಡುವವರಿಗೆ,

ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸುವ ಮತ್ತು ಕರ್ನಾಟಕ ಕಾರ್ಪೋರೇಷನ್ ಕಾಯ್ದೆ 1976ರ ಸಂಬಂಧಪಟ್ಟ ವಿಧಿಗಳ ಅನ್ವಯದಂತೆ ಹಾಗೂ ಪ್ರಚಲಿತ ಕಾನೂನು ನಿಯಮಗಳಂತೆ ಕ್ರಮಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *