ಶಿವಮೊಗ್ಗ, ಜ. 20: ಶಿವಮೊಗ್ಗ ನಗರದಲ್ಲಿ ಜ. 21 ಹಾಗೂ ಜ. 22 ರಂದು ದೈನಂದಿನ ಕುಡಿಯುವ ನೀರು (drinking water) ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ತಿಳಿಸಿದೆ.
ಶಿವಮೊಗ್ಗದ (shivamogga) ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುತ್ತಿರುವುದರಿಂದ ಎರಡು ದಿನಗಳ ಕಾಲ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ.
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

