ಜ. 25 ರಂದು ಕುಂಸಿ, ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

janauray On 25th there was power cut in villages around Kumsi and Ayanur ಜ. 25 ರಂದು ಕುಂಸಿ ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಜ. 24 : ಶಿವಮೊಗ್ಗ ತಾಲೂಕಿನ ಕುಂಸಿ ಮೆಸ್ಕಾಂ ಉಪ ವಿಭಾಗದ ಕುಂಸಿ ಮತ್ತು ಹಾರನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಜ. 25 ರಂದು ಬೆಳಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ಕುಂಸಿ, ಚಿಕ್ಕದಾನವಂದಿ, ದೊಡ್ಡದಾನವಂದಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಶೆಟ್ಟಿಕೆರೆ, ಕೋಣೆಹೊಸೂರು, ದೊಡ್ಡಿಮಟ್ಟಿ, ಕೊರಗಿ,

ಹುಬ್ಬನಹಳ್ಳಿ, ಹಾರ್ನಳ್ಳಿ, ರಾಮನಗರ, ಕೆಸುವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ, ಮಲ್ಲಾಪುರ,  ಹಿಟ್ಟೂರು,  ಸುತ್ತುಕೋಟೆ,

ಆಯನೂರು, ರಾಗಿಹೊಸಳ್ಳಿ, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ಚಿಕ್ಕಮತ್ತಲಿ, ಚನ್ನಹಳ್ಳಿ, ಇಟ್ಟಿಗೆಹಳ್ಳಿ, ಕಲ್ಲುಕೊಪ್ಪ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *