ಶಿವಮೊಗ್ಗದ ಹಂಗಾಮಿ ನೌಕರರ ಸಂಘದ ರಿಕ್ರಿಯೇಷನ್ ಕ್ಲಬ್ ನಲ್ಲಿ ಅಂದರ್  – ಬಾಹರ್ ಇಸ್ಪೀಟ್ ಜೂಜು : 18 ಜನರ ಬಂಧನ

Andar-Bahar Ispeet Gambling at Shimoga Temporary Employees Association Recreation Club :18 people arrested ಶಿವಮೊಗ್ಗದ ಹಂಗಾಮಿ ನೌಕರರ ಸಂಘದ ರಿಕ್ರಿಯೇಷನ್ ಕ್ಲಬ್ ನಲ್ಲಿ ಅಂದರ್ - ಬಾಹರ್ ಇಸ್ಪೀಟ್ ಜೂಜು : 18 ಜನರ ಬಂಧನ

ಶಿವಮೊಗ್ಗ, ಜ. 29: ಸಂಘವೊಂದರ ಮನರಂಜನಾ (ರಿಕ್ರಿಯೇಷನ್) ಕ್ಲಬ್ ಮೇಲೆ ದೊಡ್ಡಪೇಟೆ ಠಾಣೆ ಪೊಲೀಸರು ದಾಳಿ ನಡೆಸಿ, ಅಂದರ್ –ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ, 18 ಜನರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

 ಗಾರ್ಡನ್ ಏರಿಯಾದ ತುಂಗಾಭದ್ರಾ ಹಂಗಾಮಿ ನೌಕರರ ಮನೋರಂಜನಾ ಸಂಘದ ಕ್ಲಬ್ ಮೇಲೆ ಜ. 28 ರ ಸಂಜೆ, ಅಂದರ್ – ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಆರೋಪಿಗಳಿಂದ 21,700 ನಗದು, ಇಸ್ಪೀಟ್ ಎಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೆಪಿ ಕಾಯ್ದೆ ತಿದ್ದುಪಡಿ 2021 ಕಲಂ 79, 80 ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ ಎ ಜಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ನೇತೃತ್ವದಲ್ಲಿ ಇನ್ಸ್’ಪೆಕ್ಟರ್ ರವಿ ಪಾಟೀಲ್ ಮತ್ತವರ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *