ಅಪರಿಚಿತ ವಾಹನ ಡಿಕ್ಕಿ : ರಸ್ತೆ ದಾಟುತ್ತಿದ್ದ ಚಿರತೆ ಸಾವು

Unidentified vehicle collision: A leopard was killed while crossing the road ಅಪರಿಚಿತ ವಾಹನ ಡಿಕ್ಕಿ : ರಸ್ತೆ ದಾಟುತ್ತಿದ್ದ ಚಿರತೆ ಸಾವು

ಶಿವಮೊಗ್ಗ, ಫೆ. 7: ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಡು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಕರಕುಚ್ಚಿ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಆಯನೂರು – ಹಣಗೆರೆಕಟ್ಟೆ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಚಿರತೆಯು ರಸ್ತೆ ದಾಟಲು ಯತ್ನಿಸುತ್ತಿರುವ ವೇಳೆ ವಾಹನ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಚಿರತೆ ಮುಖಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸುಮಾರು ಒಂದೂವರೆ ವರ್ಷ ಪ್ರಾಯದ್ದಾಗಿದೆ. ಘಟನಾ ಸ್ಥಳಕ್ಕೆ ವನ್ಯಜೀವಿ ವಿಭಾಗದ ಡಿಎಫ್ಓ ಪ್ರಸನ್ನಕೃಷ್ಣ ಪಟೇಗಾರ್, ಆರ್.ಎಫ್.ಓ ವಿಜಯಕುಮಾರ್ ಮತ್ತವರ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು.

ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ ನಂತರ, ನಿಯಮಾನುಸಾರ ಚಿರತೆಯ ಕಳೇಬರಕ್ಕೆ ಅಗ್ನಿಸ್ಪರ್ಶ ಮಾಡಿ ಸುಡಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *