ಸ್ಮಾರ್ಟ್ ಸಿಟಿಯೋ..? ಕತ್ತಲೆ ಸಿಟಿಯೋ..? : ಶಿವಮೊಗ್ಗ ದುರ್ಗಿಗುಡಿ ರಸ್ತೆಯಲ್ಲಿ ಬೀದಿ ದೀಪಗಳ ಅವ್ಯವಸ್ಥೆ..!

Smart City…? Dark city..? ಸ್ಮಾರ್ಟ್ ಸಿಟಿಯೋ…? ಕತ್ತಲೆ ಸಿಟಿಯೋ..? Chaos of street lights on Durgigudi Road in Shimoga : As evening falls it becomes dark ಶಿವಮೊಗ್ಗ ದುರ್ಗಿಗುಡಿ ರಸ್ತೆಯಲ್ಲಿ ಬೀದಿ ದೀಪಗಳ ಅವ್ಯವಸ್ಥೆ : ಸಂಜೆಯಾಗುತ್ತಿದ್ದಂತೆ ಕವಿಯುವ ಕತ್ತಲು - ಕಣ್ಮುಚ್ಚಿ ಕುಳಿತ್ತಿದೆಯೇ ಆಡಳಿತ?

ಶಿವಮೊಗ್ಗ, ಫೆ. 14: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರಾದ್ಯಂತ ಕೋಟಿ ಕೋಟಿ ರೂ. ವೆಚ್ಚದಲ್ಲಿ ಎಲ್.ಇ.ಡಿ ಬೀದಿ ದೀಪಗಳ ಅಳವಡಿಕೆ ಮಾಡಲಾಗಿದೆ. ಕೆಲ ರಸ್ತೆ, ವೃತ್ತಗಳು ರಾತ್ರಿ ವೇಳೆ ವಿದ್ಯುತ್ ದೀಪಗಳಿಂದ ಝಗಮಗಿಸುತ್ತವೆ.

ಆದರೆ ಶಿವಮೊಗ್ಗದ ಹೃದಯ ಭಾಗವಾದ, ಪ್ರಮುಖ ವ್ಯಾಪಾರ-ವಹಿವಾಟು ಕೇಂದ್ರವಾದ, ಪ್ರತಿನಿತ್ಯ ಸಾವಿರಾರು ಜನ – ವಾಹನ ಸಂಚಾರವಿರುವ ದುರ್ಗಿಗುಡಿ ಮುಖ್ಯ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಇದಕ್ಕೆ ತದ್ವಿರುದ್ದವಾಗಿದೆ.

ಕಳೆದ ಹಲವು ತಿಂಗಳುಗಳಿಂದ ಸದರಿ ಪ್ರದೇಶಗಳಲ್ಲಿ ಬೀದಿ ದೀಪಗಳು ಬೆಳಗುತ್ತಿಲ್ಲವಾಗಿದೆ! ರಾತ್ರಿ ವೇಳೆ ಕಾರ್ಗತ್ತಲು ಆವರಿಸುತ್ತಿದೆ. ಕುಗ್ರಾಮಗಳಿಗೂ ಕಡೆಯಾದ ಸ್ಥಿತಿ ನೆಲೆಸುವಂತಾಗಿದೆ. ಹೇಳುವವರು ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.

ವಾಣಿಜ್ಯ ಕಟ್ಟಡಗಳ ಬೆಳಕಿನಿಂದ ದುರ್ಗಿಗುಡಿ ಮುಖ್ಯ ರಸ್ತೆ ಹಾಗೂ ಸಮಾನಂತರ ರಸ್ತೆಗಳಲ್ಲಿ ಸಂಜೆ ವೇಳೆ ಬೆಳಕು ಬೀಳುತ್ತದೆ. ತದನಂತರ ರಾತ್ರಿ ವೇಳೆ ರಸ್ತೆಯಲ್ಲಿ ಕತ್ತಲು ಆವರಿಸುತ್ತದೆ. ಜನ – ವಾಹನ ಸಂಚಾರ ದುರಸ್ತರವಾಗಿ ಪರಿಣಮಿಸುವಂತಾಗಿದೆ.

ರಾತ್ರಿ ವೇಳೆ ಸ್ಥಳೀಯರು ಮನೆಯಿಂದ ಹೊರಬರಲು ಭಯಪಡುವಂತಹ ಸ್ಥಿತಿಯಿದೆ. ನಗರದ ಹೃದಯ ಭಾಗದಲ್ಲಿಯೇ ಇಂತಹ ದುಃಸ್ಥಿತಿಯಿದ್ದರೂ ಇಲ್ಲಿಯವರೆಗೂ ಅವ್ಯವಸ್ಥೆ ಸರಿಪಡಿಸಲು ಮಹಾನಗರ ಪಾಲಿಕೆ ಆಡಳಿತ ಸರಿಪಡಿಸಲ ಮುಂದಾಗಿಲ್ಲ ಎಂದು ನಿವಾಸಿಗಳು ಆರೋಪಿಸುತ್ತಾರೆ.

ಇನ್ನಾದರೂ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಗಮನಹರಿಸಬೇಕಾಗಿದೆ. ಕಾಲಮಿತಿಯೊಳಗೆ ದುರ್ಗಿಗುಡಿ ಮುಖ್ಯ ರಸ್ತೆ ಹಾಗೂ ಇಕ್ಕೆಲಗಳಲ್ಲಿ ಬೀದಿ ದೀಪ ಅಳವಡಿಸಿ ನೆರವಾಗುವ ಕಾರ್ಯ ನಡೆಸಬೇಕಾಗಿದೆ ಎಂದು ಸ್ಥಳೀಯ ವರ್ತಕರು ಹಾಗೂ ನಿವಾಸಿಗಳು ಆಗ್ರಹಿಸುತ್ತಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *