ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ಎಸ್.ಬಂಗಾರಪ್ಪ ನಗರ ಹೆಸರಿಡಲು ಆಗ್ರಹ

Demand to name 'S.Bangarappa Nagar' for Shimoga Bommanakatte shelter area ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ‘ಎಸ್.ಬಂಗಾರಪ್ಪ ನಗರ’ ಹೆಸರಿಡಲು ಆಗ್ರಹ

ಶಿವಮೊಗ್ಗ, ಫೆ. 23: ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ, ಮಾಜಿ ಮುಖ್ಯಮಂತ್ರಿ ದಿವಂಗತ ‘ಎಸ್.ಬಂಗಾರಪ್ಪ ನಗರ’ ಎಂದು ಹೆಸರಿಡಲು ಕ್ರಮಕೈಗೊಳ್ಳಬೇಕೆಂದು ಮಹಾನಗರ ಪಾಲಿಕೆ ಆಡಳಿತಕ್ಕೆ ಎಸ್.ಬಂಗಾರಪ್ಪ ಅಭಿಮಾನಿಗಳ ಸಂಘ ಆಗ್ರಹಿಸಿದೆ.

ಈ ಸಂಬಂಧ ಶುಕ್ರವಾರ ಮಹಾನಗರ ಪಾಲಿಕೆ ಕಚೇರಿಯಲ್ಲಿ ಆಯುಕ್ತ ಮಾಯಣ್ಣಗೌಡ ಅವರಿಗೆ ಸಂಘಟನೆ ಮನವಿ ಪತ್ರ ಅರ್ಪಿಸಿದೆ.

ಬಡ – ಮಧ್ಯಮ ವರ್ಗದ ವಸತಿರಹಿತರಿಗೆ ಅನುಕೂಲ ಕಲ್ಪಿಸಿಕೊಡಲು, ಎಸ್.ಬಂಗಾರಪ್ಪ ಅವರು ಬೊಮ್ಮನಕಟ್ಟೆ ಆಶ್ರಯ ಬಡಾವಣೆ ರಚನೆಗೆ ಕ್ರಮಕೈಗೊಂಡಿದ್ದರು. ಪ್ರಸ್ತುತ ಸದರಿ ಬಡಾವಣೆಯಲ್ಲಿ 7 ಸಾವಿರ ಮನೆಗಳಿದ್ದು, 25 ರಿಂದ 30 ಸಾವಿರ ಜನಸಂಖ್ಯೆಯಿದೆ.

ಇಲ್ಲಿಯವರೆಗೂ ಸದರಿ ಬಡಾವಣೆಗೆ ಯಾವುದೇ ಹೆಸರಿಟ್ಟಿಲ್ಲ. ಬಡಾವಣೆ ರಚನೆಗೆ ಮೂಲ ಕಾರಣಕರ್ತರಾದ ಎಸ್.ಬಂಗಾರಪ್ಪ ಅವರ ಸ್ಮರಣಾರ್ಥ, ಎಸ್.ಬಂಗಾರಪ್ಪ ನಗರ ಎಂದು ನಾಮಕರಣ ಮಾಡಲು ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಬೊಮ್ಮನಕಟ್ಟೆ ಮಾಲತೇಶ್ ಕೆ, ಪ್ರಮುಖರಾದ ಜಯಪ್ಪ, ಪ್ರಕಾಶ್, ರಾಮಕೃಷ್ಣ, ಕೃಷ್ಣಮೂರ್ತಿ, ಲಕ್ಷ್ಮಣನಾಯ್ಕ್, ವಜೀರ್ ಬೇಗ್ ಸೇರಿದಂತೆ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *