‘ಬಿಜೆಪಿಯಿಂದ ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ’ : ಸಿಎಂ

No need to learn the lesson of patriotism from BJP: CM Continued BJP outrage in the assembly ಬಿಜೆಪಿ ಯಿಂದ ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ : ಸಿಎಂ ವಿಧಾನಸಭೆಯಲ್ಲಿ ಮುಂದುವರಿದ ಬಿಜೆಪಿ ಆಕ್ರೋಶ

ಬೆಂಗಳೂರು ಫೆ. 29: ‘ಆರ್.ಎಸ್.ಎಸ್.ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ.  ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ. ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಬಿಜೆಪಿಯವರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಲಾಯಕ್ಕೇ’ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಜನರು ಸೋಲಿಸಲಿದ್ದಾರೆ. ವಿರೋಧ ಪಕ್ಷದ ಅಧಿಕಾರ ನೀಡುತ್ತಾರೆ ಎಂದು ನುಡಿದರು.‌

ರಾಜ್ಯಸಭಾ  ಚುನಾವಣೆಯಲ್ಲಿ  ಬಿಜೆಪಿಯ ಇಬ್ಬರು ಕಾಂಗ್ರೆಸ್ ಪರವಾಗಿದ್ದುದ್ದನ್ನು ಮರೆಮಾಚಲು ವಿಧಾನ ಸಭೆಯಲ್ಲಿ ಗದ್ದಲ ಎಬ್ಬಿಸಿದ್ದಾರೆ ಎಂದರು.

ಪೈಪೋಟಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ತಮ್ಮ ಚರ್ಚೆಯಲ್ಲಿ 30% ಕೇಂದ್ರ ಸರ್ಕಾರವನ್ನು ಹೊಗಳಿದ್ದಾರೆ. ಜೆಡಿಎಸ್ ಕೂಡ ಪೈಪೋಟಿಗೆ ಬಿದ್ದಂತೆ ಅದನ್ನೇ ಮಾಡಿದೆ ಎಂದರು.

ಜೆಡಿಎಸ್ ತಮ್ಮ ಪಕ್ಷದ ಹೆಸರಿನಲ್ಲಿರುವ “ಎಸ್” ನ್ನು ತೆಗೆದುಹಾಕುವುದು ಉತ್ತಮ. ಏಕೆಂದರೆ  ಅದು ಈಗ ಜಾತ್ಯತೀತ ವಾಗಿ ಉಳಿದಿಲ್ಲ ಎಂದು ಕುಟುಕಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *