ಮಾರ್ಚ್ 8 ರ ಶಿವರಾತ್ರಿ ಹಬ್ಬದಂದು ಮಾಂಸ ಮಾರಾಟ ನಿಷೇಧ!

Ban on sale of meat on the day of Shivratri festival of March 8! ಮಾರ್ಚ್ 8 ರ ಶಿವರಾತ್ರಿ ಹಬ್ಬದ ದಿನದಂದು ಮಾಂಸ ಮಾರಾಟ ನಿಷೇಧ!

ಶಿವಮೊಗ್ಗ, ಮಾ. 6: ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ  ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →