ಶಿವಮೊಗ್ಗದ ಬಾಪೂಜಿ ನಗರದಲ್ಲಿ ವ್ಯಕ್ತಿಯ ಕೊಲೆ!

Shimoga: A man was killed by hitting him with cricket bats and wickets! ಶಿವಮೊಗ್ಗದ ಬಾಪೂಜಿ ನಗರದಲ್ಲಿ ವ್ಯಕ್ತಿಯ ಕೊಲೆ!

ಶಿವಮೊಗ್ಗ (Shivamogga), ಏ. 20: ಶಿವಮೊಗ್ಗದ ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಸಮೀಪದ ಗಂಗಮ್ಮ ದೇವಾಲಯದ ಬಳಿ ಶನಿವಾರ ಸಂಜೆ ವ್ಯಕ್ತಿಯೋರ್ವರನ್ನು ಕೊಲೆ (murder) ಮಾಡಿರುವ ಘಟನೆ ನಡೆದಿದೆ.

ಸುರೇಶ್ ಅಲಿಯಾಸ್ ಸೂರಿ (45) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹೋಟೆಲ್ ವೊಂದರ ಮುಂಭಾಗ ಮಾತನಾಡುತ್ತಾ ನಿಂತಿದ್ದ ಸೂರಿಯ ಮೇಲೆ  ಗುಂಪೊಂದು ದಾಳಿ ನಡೆಸಿ ಕೊಲೆ ಮಾಡಿ ಪರಾರಿಯಾಗಿದೆ. ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಕೋಟಿ ಠಾಣೆ ಪೊಲೀಸರು (shimoga kote police station) ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಇನ್ನಷ್ಟೆ ಹೆಚ್ಚಿನ ವಿವರಗಳು ತಿಳಿದು ಬರಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *