1 ಲಕ್ಷ ಮತಗಳ ಭಾರೀ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ!

BJP candidate B. Y. Raghavendra who won a massive lead of 1 lakh votes! 1 ಲಕ್ಷ ಮತಗಳ ಭಾರೀ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ!

ಶಿವಮೊಗ್ಗ (shivamogga), ಜೂ 4: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಬಿರುಸುಗೊಂಡಿದೆ. ಈ ನಡುವೆ  ಮತ ಗಳಿಕೆಗೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಭಾರೀ ಮುನ್ನಡೆ ಸಾಧಿಸಲಾರಂಭಿಸಿದ್ದಾರೆ. ಪ್ರತಿಯೊಂದು ಸುತ್ತಿನಲ್ಲಿಯೂ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ.

ಬೆಳಿಗ್ಗೆ 11. 20 ರ ಮಾಹಿತಿಯಂತೆ ಬಿ.ವೈ.ರಾಘವೇಂದ್ರ ಅವರು 3,54,207 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು 2,48,280 ಮತ ಗಳಿಸಿದ್ದಾರೆ. ಬಿ.ವೈ.ರಾಘವೇಂದ್ರ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಗೀತಾ ಶಿವರಾಜಕುಮಾರ್ ಅವರಿಗಿಂತ 1,05,927 ಮತಗಳ ಲೀಡ್ ನಲ್ಲಿದ್ದಾರೆ.

ಉಳಿದಂತೆ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಬೇಕೆಂದೆ ಕಣಕ್ಕಿಳಿದಿದ್ದ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಮತಗಳಿಕೆ ಅತ್ಯಂತ ಕಡಿಮೆಯಿರುವುದು ಕಂಡುಬರುತ್ತಿದೆ. ಕೆ ಎಸ್ ಈಶ್ವರಪ್ಪ ಅವರಿಗೆ  14,144 ಮತಗಳು ಸಂದಾಯವಾಗಿವೆ. ಮತ ಎಣಿಕೆ ಮುಂದುವರೆದಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *