ಶಿವಮೊಗ್ಗ, ಮೈಸೂರು, ತುಮಕೂರು ಮಹಾನಗರ ಪಾಲಿಕೆಗಳ ಚುನಾವಣೆ ಯಾವಾಗ?

When are the Shimoga Mysore Tumkur Municipal Corporation Elections? ಶಿವಮೊಗ್ಗ ಮೈಸೂರು ತುಮಕೂರು ಮಹಾನಗರ ಪಾಲಿಕೆಗಳ ಚುನಾವಣೆ ಯಾವಾಗ? ವರದಿ : ಬಿ. ರೇಣುಕೇಶ್

ಶಿವಮೊಗ್ಗ, ಜೂ. 7: ಅಧಿಕಾರಾವಧಿ ಪೂರ್ಣಗೊಂಡು ಏಳೆಂಟು ತಿಂಗಳಾಗುತ್ತ ಬಂದರೂ ಶಿವಮೊಗ್ಗ (shimoga), ಮೈಸೂರು (mysuru) ಹಾಗೂ ತುಮಕೂರು (tumakuru) ಮಹಾನಗರ ಪಾಲಿಕೆಗಳ (municipal corporation) ವಾರ್ಡ್ ಚುನಾವಣೆ ಪ್ರಕ್ರಿಯೆ ಆರಂಭವಾಗಿಲ್ಲ. ಸಂಪೂರ್ಣ ನೆನೆಗುದಿಗೆ ಬಿದ್ದಿದೆ. ಸದ್ಯಕ್ಕೆ ಚುನಾವಣೆ ನಡೆಯುವ ಯಾವುದೇ ಲಕ್ಷಣಗಳು ಗೋಚರವಾಗುತ್ತಿಲ್ಲವಾಗಿದೆ!

ಈ ಮೂರು ಪಾಲಿಕೆಗಳಿಗೆ 2018 ರ ಆಗಸ್ಟ್ 31 ರಂದು ಚುನಾವಣೆ ನಡೆದಿತ್ತು. ಸೆಪ್ಟೆಂಬರ್ 3 ರಂದು ಮತಗಳ ಎಣಿಕೆಯಾಗಿತ್ತು. ನವೆಂಬರ್ ತಿಂಗಳಲ್ಲಿ ಮೇಯರ್ – ಉಪ ಮೇಯರ್ ಗಳ ಆಯ್ಕೆಯಾಗಿತ್ತು. ಮೊದಲ ಸಾಮಾನ್ಯ ಸಭೆಯಿಂದ ಹಾಲಿ ಸದಸ್ಯರ ಅಧಿಕಾರಾವಧಿ ಆರಂಭಗೊಂಡಿತ್ತು.

ಈ ಹಿಂದಿನ ಕಾರ್ಪೋರೇಟರ್ ಗಳ (corporators) ಅಧಿಕಾರಾವಧಿ 2023 ರ ನವೆಂಬರ್ ತಿಂಗಳಲ್ಲಿ ಅಂತ್ಯಗೊಂಡಿತ್ತು. ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ಕಳೆದ ಡಿಸೆಂಬರ್ – ಜನವರಿ ತಿಂಗಳಲ್ಲಿ ಚುನಾವಣೆ ನಡೆಯಬೇಕಾಗಿತ್ತು. ಆದರೆ ಲೋಕಸಭೆ ಸಾರ್ವತ್ರಿಕ ಚುನಾವಣೆ (loksabha election) ಕಾರಣದಿಂದ, ರಾಜ್ಯ ಸರ್ಕಾರ ಮೂರು ಪಾಲಿಕೆಗಳಿಗೆ ಚುನಾವಣೆ ನಡೆಸುವ ಗೋಜಿಗೆ ಮುಂದಾಗಿರಲಿಲ್ಲ. ಆಡಳಿತಾಧಿಕಾರಿಗಳ ನಿಯೋಜನೆ ಮಾಡಲಾಗಿತ್ತು.

ಸದ್ಯ ಲೋಕಸಭೆ ಚುನಾವಣೆ ಪೂರ್ಣಗೊಂಡಿದೆ. ಆದರೆ ರಾಜ್ಯ ಸರ್ಕಾರದ (state govt) ಹಂತದಲ್ಲಿ ಚುನಾವಣಾ ಪೂರ್ವಭಾವಿ ಸಿದ್ದತೆಗಳು ಆರಂಭವಾಗಿಲ್ಲ. ಇದರಿಂದ ಈ ಮೂರು ಪಾಲಿಕೆಗಳಿಗೆ ಚುನಾವಣೆ ಮತ್ತಷ್ಟು ತಿಂಗಳುಗಳ ಕಾಲ ವಿಳಂಬವಾಗಲಿದೆಯೇ? ಎಂಬ ಅನುಮಾನಗಳು ಮೂಡುವಂತಾಗಿದೆ.

ಈಗಾಗಲೇ ನಾನಾ ಆಡಳಿತಾತ್ಮಕ ಮತ್ತೀತರ ಕಾರಣದಿಂದ ಜಿಲ್ಲಾ ಪಂಚಾಯ್ತಿ (zp) ಹಾಗೂ ತಾಲೂಕು ಪಂಚಾಯ್ತಿಗಳಿಗೆ (tp) ಇಲ್ಲಿಯವರೆಗೂ ಚುನಾವಣೆ ನಡೆದಿಲ್ಲ. ಇದೇ ರೀತಿಯಲ್ಲಿ ಅಧಿಕಾರಾವಧಿ ಪೂರೈಸಿರುವ ಮೂರು ಪಾಲಿಕೆಗಳ ಸ್ಥಿತಿಯೂ ಆಗಲಿದೆಯೇ? ಎಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ನಡೆಯುತ್ತಿವೆ.

ಬೃಹತ್ ಬೆಂಗಳೂರು (bengaluru) ಮಹಾನಗರ ಪಾಲಿಕೆ (bbmp) ಚುನಾವಣೆ ನಡೆಸಲು ಸರ್ಕಾರ ಸಿದ್ದವಿರುವುದಾಗಿ ಈಗಾಗಲೇ ಸಿಎಂ – ಡಿಸಿಎಂ (cm – dcm) ಹೇಳಿದ್ದಾರೆ. ಈ ವೇಳೆ ಶಿವಮೊಗ್ಗ, ತುಮಕೂರು, ಮೈಸೂರು ಮಹಾನಗರ ಪಾಲಿಕೆಗಳ ಚುನಾವಣೆ ನಡೆಸಲು ಸರ್ಕಾರ ಮುಂದಾಗುವ ಸಾಧ್ಯತೆಗಳಿದೆ ಎನ್ನಲಾಗುತ್ತಿದೆ.

ಮತ್ತೊಂದೆಡೆ, ಕೆಲ ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ವಾರ್ಡ್ ಚುನಾವಣೆ ನಡೆಸಲು ಸರ್ಕಾರದ ಮೇಲೆ ಒತ್ತಡ ಹಾಕಲಾರಂಭಿಸಿದ್ದಾರೆ ಎಂಬ ಮಾಹಿತಿಗಳು ರಾಜಕೀಯ ವಲಯದಿಂದ ಕೇಳಿಬರಲಾರಂಭಿಸಿದೆ. ಒಟ್ಟಾರೆ ಬಿಬಿಎಂಪಿ, ಶಿವಮೊಗ್ಗ, ತುಮಕೂರು ಹಾಗೂ ಮೈಸೂರು ಪಾಲಿಕೆಗಳ ಚುನಾವಣೆ ಯಾವಾಗ ಎಂಬುವುದು ಯಕ್ಷಪ್ರಶ್ನೆಯಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *