ಮಳೆ – ಭೂ ಕುಸಿತ ಸಾಧ್ಯತೆ : ಆಗುಂಬೆ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ!

Rain - Landslide possibility: Traffic ban for heavy vehicles in Agumbe Ghat! ಮಳೆ – ಭೂ ಕುಸಿತ ಸಾಧ್ಯತೆ : ಆಗುಂಬೆ ಘಾಟ್ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ!

ಶಿವಮೊಗ್ಗ (shivamogga), ಜೂ. 27: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ (agumbe ghat) ರಸ್ತೆಯಲ್ಲಿ ಜೂನ್ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರೀ ಸರಕು ಸಾಗಾಣೆ – ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ (dc) ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ 169 ಎ ತೀರ್ಥಹಳ್ಳಿ – ಮಲ್ಪೆ ರಸ್ತೆಯ (Theerthahalli – Malpe Road) ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದ ಹಾಗೂ ಭಾರೀ ವಾಹನಗಳ ಸಂಚಾರದಿಂದ, ಘಾಟಿ ರಸ್ತೆಯ ವಿವಿಧೆಡೆ ಭೂ ಕುಸಿತವಾಗು ಸಾಧ್ಯತೆಗಳಿವೆ. ಈ ಕಾರಣದಿಂದ 27-6-2024 ರಿಂದ 15-9-2024 ರವರೆಗೆ ಭಾರೀ ವಾಹನಗಳ ಸಂಚಾರ ನಿರ್ಬಂಧಿಸುವಂತೆ ಕೋರಿ ರಾಷ್ಟ್ರೀಯ ಹೆದ್ದಾರಿ (national highway) ಇಲಾಖೆಯು ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿತ್ತು.

ಅದೇ ರೀತಿಯಲ್ಲಿ ಪೊಲೀಸ್ ಇಲಾಖೆ (police dept) ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯು (rto) ಕೂಡ ಆಗುಂಬೆ ಘಾಟಿಯಲ್ಲಿ ತಾತ್ಕಾಲಿಕವಾಗಿ ಭಾರೀ ಸರಕು ಸಾಗಾಣೆ ವಾಹನಗಳ ಸಂಚಾರ ನಿರ್ಬಂಧಿಸುವಂತೆ ಜಿಲ್ಲಾಡಳಿತಕ್ಕೆ ಅಭಿಪ್ರಾಯ ವ್ಯಕ್ತಪಡಿಸಿದ್ದವು.

ಈ ಕೋರಿಕೆಗಳ ಅನ್ವಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ ನಿಯಮಾವಳಿಯಂತೆ ಆಗುಂಬೆ ಘಾಟಿ ರಸ್ತೆಯಲ್ಲಿ ನಿರ್ದಿಷ್ಟ ಅವಧಿಯವರೆಗೆ ಭಾರೀ ಸರಕು ಸಾಗಾಣೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗವಾದ ತೀರ್ಥಹಳ್ಳಿ – ಮಾಸ್ತಿಕಟ್ಟೆ – ಸಿದ್ದಾಪುರ – ಕುಂದಾಪುರ – ಉಡುಪಿ ಮಾರ್ಗವಾಗಿ ವಾಹನಗಳು ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *