ಸಚಿವರ ಕಚೇರಿ ಎದುರು ಪ್ರತಿಭಟನೆ : ಎಬಿವಿಪಿ ಕಾರ್ಯಕರ್ತರು ಅರೆಸ್ಟ್!

Protest in front of minister's office: ABVP workers arrested! ಸಚಿವರ ಕಚೇರಿ ಎದುರು ಪ್ರತಿಭಟನೆ : ಎಬಿವಿಪಿ ಕಾರ್ಯಕರ್ತರು ಅರೆಸ್ಟ್! ಶಿವಮೊಗ್ಗ shivamogga

ಶಿವಮೊಗ್ಗ (shivamogga) ಜು. 11: ಶಿವಮೊಗ್ಗ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಕಟ್ಟಡದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Incharge minister Madhu Bangarappa) ಅವರ ಕಚೇರಿ ಎದರು ಪ್ರತಿಭಟನೆ ನಡೆಸುತ್ತಿದ್ದ, ಎಬಿವಿಪಿ (Abvp) ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಗುರುವಾರ ನಡೆಯಿತು.

ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು (minister) ಆಗಮಿಸಿ ಸಂಘಟನೆಯ ಅಹವಾಲು ಆಲಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರು ಮನವೊಲಿಸುವ ಕಾರ್ಯ ನಡೆಸಿದರು. ಆದರೆ ಪ್ರತಿಭಟನಾಕಾರರು ಧರಣಿ ಮುಂದುವರೆಸಿದ್ದರಿಂದ, ಪೊಲೀಸರು (police) ಸುಮಾರು 20 ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದೊಯ್ದರು. ನಂತರ ಅವರನ್ನು ಬಿಡುಗಡೆಗೊಳಿಸಿದರು.

ಬೇಡಿಕೆಗಳು : ರಾಜ್ಯ ಸರ್ಕಾರ (state govt) ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹಣ ಹೊಂದಿಸಲು, ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ನ್ಯಾಯಬದ್ದ ಸೌಲಭ್ಯಗಳನ್ನು ಕಸಿದುಕೊಳ್ಳುವ ಕಾರ್ಯ ನಡೆಸುತ್ತಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ (students) ಸಮರ್ಪಕವಾಗಿ ವಿದ್ಯಾರ್ಥಿ ವೇತನ (scholarship) ಸೌಲಭ್ಯ ಕಲ್ಪಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ರೋಪಿಸಿದ್ದಾರೆ.

ವಿದ್ಯಾರ್ಥಿಗಳು ಬಸ್ ಪಾಸ್ (bus pass) ಸೌಲಭ್ಯ ಪಡೆಯಲು ಅಲೆದಾಡುವಂತಹ ದುಸ್ಥಿತಿ ಇದೆ. ಆರ್ಜಿ ಸಲ್ಲಿಸಿದ ನಂತರ ವಾರಗಟ್ಟಲೆ ಬಸ್ ಪಾಸ್ ಗೆ ಕಾಯುವಂತಾಗಿದೆ. ಕಾಲಮಿತಿಯೊಳಗೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಒದಗಿಸುವ ಕಾರ್ಯ ನಡೆಸಬೇಕು. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಓಡಾಟಕ್ಕೆ ಹೆಚ್ಚಿನ ಸರ್ಕಾರಿ ಬಸ್ (Ksrtc bus) ಸೌಲಭ್ಯ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಶಾಲಾ ಕಾಲೇಜು ಆರಂಭವಾಗಿ ತಿಂಗಳುಗಳೇ ಕಳೆದರೂ ಸರ್ಕಾರಿ ಹಾಸ್ಟೆಲ್ (govt hostel) ಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಸೌಲಭ್ಯ ದೊರಕುತ್ತಿಲ್ಲ. ಇದರಿಂದ ಗ್ರಾಮೀಣ ಹಾಗೂ ಬಡ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳು ತೀವ್ರ ತೊಂದರೆ ಎದುರಿಸುವಂತಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳಿಗೆ ಏಕರೂಪದ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ತಕ್ಷಣವೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ( abvp) ಒತ್ತಾಯಿಸಿದೆ. ಪ್ರತಿಭಟನೆಯಲ್ಲಿ ಎಬಿಬಿಪಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಪ್ರವೀಣ್ ಎಚ್ ಕೆ, ಮುಖಂಡರಾದ ಲೋಹಿತ್, ತೇಜಸ್, ಪುನೀತ್, ರವಿ, ಅಭಿಷೇಕ್, ಸಿಂಚನ, ರಂಜನಿ ವರುಣ್ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →