ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ವಿಧಿವಶ!

Famous Kannada presenter actress aparna Vidhiwasa! ಕನ್ನಡದ ಖ್ಯಾತ ನಿರೂಪಕಿ ನಟಿ ಅಪರ್ಣಾ ವಿಧಿವಶ! death anchor actress

ಬೆಂಗಳೂರು (bengaluru), ಜು. 12: ಖ್ಯಾತ ನಿರೂಪಕಿ, ನಟಿ ಅಪರ್ಣಾ ವಸ್ತಾರೆ (58) #aparna_actress ಅವರು ಅನಾರೋಗ್ಯದಿಂದ ಗುರುವಾರ ರಾತ್ರಿ (ಜುಲೈ 11) ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ (private hospital) ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ (passed away).

ಶ್ವಾಸಕೋಶದ ಕ್ಯಾನ್ಸರ್ (lung cancer) ನಿಂದ ಅಪರ್ಣಾ (aparna) ಅವರು ಬಳಲುತ್ತಿದ್ದರು. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಜಯನಗರದ (jayanagara) ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿ 9.45 ನಿಮಿಷಕ್ಕೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಚಿಕಿತ್ಸೆ (treatment) ಪಡೆದುಕೊಳ್ಳುತ್ತಿದ್ದರು ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.

ಬನಶಂಕರಿಯಲ್ಲಿರುವ (banashankari) ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಅಪರ್ಣಾ ಅವರ ಮೃತದೇಹವನ್ನು ತರಲಾಗಿದ್ದು, ಪಾರ್ಥಿವ ಶರೀರದ (mortal body) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಜನಪ್ರಿಯ ಮುಖ : ಅಪರ್ಣಾ ಅವರು ಚಿಕ್ಕಮಗಳೂರು (chikmagalur) ಜಿಲ್ಲೆ ಪಂಚನಹಳ್ಳಿ ಮೂಲದವರಾಗಿದ್ದಾರೆ. 1990 ರಲ್ಲಿ ದೂರದರ್ಶನದಲ್ಲಿ (dooradarshana) ನಿರೂಪಕಿಯಾಗಿ (anchor) ಅವರು ವೃತ್ತಿ ಜೀವನ ಆರಂಭಿಸಿದ್ದರು. ದೂರದರ್ಶನದಲ್ಲಿ ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮಗಳ ಮೂಲಕ ಜನಮಾನಸದಲ್ಲಿ ಸಾಕಷ್ಟು ಜನಪ್ರಿಯತೆ ಸಂಪಾದಿಸಿದ್ದರು.

1984 ರಲ್ಲಿ ಖ್ಯಾತ ನಿರ್ದೇಶಕ ಪುಟ್ಟಣ ಕಣಗಾಲ್ (puttana kangal) ಅವರು ನಿರ್ದೇಶಿಸಿದ ಮಸಣದ ಹೂವು ಚಿತ್ರದಲ್ಲಿ ನಟಿಸುವ ಮೂಲಕ ಸಿನಿಮಾ ರಂಗಕ್ಕೆ (cinema) ಪದಾರ್ಪಣೆ ಮಾಡಿದ್ದರು. ಧಾರವಾಹಿಗಳಲ್ಲಿ (serial), ರಿಯಾಲಿಟಿ ಶೋ, ಕಾಮಿಡಿ ಕಾರ್ಯಕ್ರಗಳಲ್ಲಿಯೂ ಅವರು ನಟಿಸಿದ್ದರು. ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿಯೂ ಅವರು ಸ್ಪರ್ಧಿಯಾಗಿದ್ದರು.

ಶೋಕ : ನಟಿ ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ (cm siddaramaiah) ಸೇರಿದಂತೆ ಕನ್ನಡ ಚಲನಚಿತ್ರರಂಗ ಹಾಗೂ ನಾಡಿನ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ (condolence) ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ (ಟ್ವಿಟರ್) ನಲ್ಲಿ ಸಂತಾಪ ಸಂದೇಶ ಹಾಕಿದ್ದಾರೆ.

‘ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿಯಾಗಿದೆ.

ಮೃತ ಅಪರ್ಣಾರವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುವುದಾಗಿ’ ಸಿಎಂ ಸಿದ್ದರಾಮಯ್ಯ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *