ಮುಂದುವರಿದ ಭಾರೀ ಮಳೆ : ಜು. 18 ರಂದು ಹೊಸನಗರ ತಾಲೂಕಿನ ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ!

continued heavy rain : holiday announcement for schools and colleges of Hosnagar taluk on june 18th! ಮುಂದುವರಿದ ಭಾರೀ ಮಳೆ : ಜು. 18 ರಂದು ಹೊಸನಗರ ತಾಲೂಕಿನ ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ!

ಹೊಸನಗರ (hosanagara), ಜು. 17: ಭಾರೀ ಮಳೆ (hevay rainfall) ಮುಂದುವರಿದಿರುವುದರಿಂದ ಹೊಸನಗರ (hosangara) ತಾಲೂಕಿನಾದ್ಯಂತ ಜು. 18 ಗುರುವಾರದಂದು ಎಲ್ಲ ಶಾಲೆ (schools), ಕಾಲೇಜ್ (colleges), ಅಂಗನವಾಡಿಗಳಿಗೆ (anganwadis) ರಜೆ ಘೋಷಣೆ (holiday declare) ಮಾಡಲಾಗಿದೆ.

ಶಾಲಾ – ಕಾಲೇಜ್, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ (hosanagar tahsildar rashmi halesh) ಅವರು ಆದೇಶ ಹೊರಡಿಸಿದ್ದಾರೆ.

ಹೊಸನಗರ ತಾಲೂಕು ವ್ಯಾಪ್ತಿಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ (heavy to heavy rainfall) ಅನೇಕ ಕಡೆ ಮಳೆ ಸಂಬಂಧಿತ ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ (declaration of holiday) ಎಂದು ತಹಶೀಲ್ದಾರ್ ಅವರು ತಿಳಿಸಿದ್ದಾರೆ.

ಭಾರೀ ಮಳೆ : ಹೊಸನಗರ ತಾಲೂಕಿನಾದ್ಯಂತ (hosanagara taluk) ಕಳೆದ ನಾಲ್ಕೈದು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದೆ (rainfall). ಘಟ್ಟ ಪ್ರದೇಶಗಳಲ್ಲಿ (western ghat) ವರ್ಷಧಾರೆಯ ಅಬ್ಬರ ಜೋರಾಗಿದೆ. ಈ ನಡುವೆ ಜು. 17 ಹಾಗೂ ಜು. 18 ರಂದು ಶಿವಮೊಗ್ಗ ಜಿಲ್ಲೆಯಲ್ಲಿ (shimoga district) ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ (red alert) ಘೋಷಣೆ ಮಾಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →