ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

6 days a week supplementary nutritious food distribution program for government school children ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಉದಯ

ಬೆಂಗಳೂರು, (bengaluru) ಜು 20: ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ (chief minister siddaramaiah) ನುಡಿದರು. 

ಅಜೀಂಪ್ರೇಮ್ ಜಿ ಫೌಂಡೇಷನ್ (azimprem g foundation) ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ (govt schools childrens) ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ (nutritious food distribution) ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ (lunch and eggs) ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ (govt) ಜೊತೆಗೆ ಕೈಜೋಡಿಸಿದ್ದಾರೆ ಎಂದರು. 

ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು. 

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ (uniform, shoes, socks) ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ (education minister madhu bangarappa), ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →