ಮಲೆನಾಡಲ್ಲಿ ತಗ್ಗಿದ ಮಳೆ : ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!

Decreasing rainfall in the hills: Decrease in inflow of linganamakki tunga bhadra reservoirs ಮಲೆನಾಡಲ್ಲಿ ತಗ್ಗಿದ ಮಳೆ : ಲಿಂಗನಮಕ್ಕಿ ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ

ಶಿವಮೊಗ್ಗ, ಜು. 22: ಪಶ್ಚಿಮಘಟ್ಟ (western ghat) ವ್ಯಾಪ್ತಿಯ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಮುಂಗಾರು ಮಳೆಯ (monsoon rain) ತೀವ್ರತೆ ಕಡಿಮೆಯಾಗಿದೆ. ಮತ್ತೊಂದೆಡೆ, ಜಿಲ್ಲೆಯ ಪ್ರಮುಖ ಜಲಾಶಯಗಳಾದ (dams) ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ.

ಸೋಮವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂನ (linganamakki dam) ಒಳಹರಿವು 44,387 ಕ್ಯೂಸೆಕ್ ಇದೆ. 1898 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ (out flow). ನೀರಿನ ಮಟ್ಟ 1797. 60 (ಗರಿಷ್ಠ ಮಟ್ಟ : 1819) ಅಡಿಯಿದೆ. ಡ್ಯಾಂನಲ್ಲಿ ಒಟ್ಟಾರೆ 90. 14 ಟಿಎಂಸಿಯಷ್ಟು (tmc) ನೀರು ಸಂಗ್ರಹವಾಗಿದೆ.

ಶಿವಮೊಗ್ಗ – ದಾವಣಗೆರೆ (shimoga – davanagere) ಜಿಲ್ಲೆಗಳ ರೈತರ ಜೀವನಾಡಿ ಎಂದೇ ಕರೆಯಲಾಗುವ ಭದ್ರಾ ಜಲಾಶಯದ (bhadra dam) ಒಳಹರಿವು 25,367 ಕ್ಯೂಸೆಕ್ ಇದೆ. ಭಾನುವಾರ ಒಳಹರಿವಿನ ಪ್ರಮಾಣ 23 ಸಾವಿರ ಕ್ಯೂಸೆಕ್ ನಷ್ಟಿತ್ತು. ಡ್ಯಾಂನ ನೀರಿನ ಮಟ್ಟ 166. 6 ಅಡಿ (ಗರಿಷ್ಠ ಮಟ್ಟ : 186) ಇದೆ.

ತುಂಗಾ ಡ್ಯಾಂ (tunga dam) ಈಗಾಗಲೇ ಗರಿಷ್ಠ ಮಟ್ಟ ತಲುಪಿದೆ. ಪ್ರಸ್ತುತ 36,055 ಕ್ಯೂಸೆಕ್ ಒಳಹರಿವಿದೆ (inflow). ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ 34,150 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಹೊರ ಬಿಡಲಾಗುತ್ತಿದೆ.

ಮಳೆ ವಿವರ : ಜು. 22 ರ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆಯ (rain) ವಿವರ ಈ ಮುಂದಿನಂತಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಾದ ಮಾಣಿ (mani) 68 ಮಿಲಿ ಮೀಟರ್, ಯಡೂರು (yadur) 78 ಮಿ.ಮೀ., ಹುಲಿಕಲ್ (hulikal) 98 ಮಿ.ಮೀ., ಮಾಸ್ತಿಕಟ್ಟೆ (masthikatte) 104 ಮಿ.ಮೀ. ಮಳೆಯಾಗಿದೆ.

ಶಿವಮೊಗ್ಗ (shimoga) 6. 70 ಮಿ.ಮೀ., ಭದ್ರಾವತಿ (bhadravati) 7. 50 ಮಿ.ಮೀ., ತೀರ್ಥಹಳ್ಳಿ (thirthahalli) 36. 10 ಮಿ.ಮೀ., ಸಾಗರ (sagar) 57 ಮಿ.ಮೀ., ಶಿಕಾರಿಪುರ (shikaripur) 20,  80 ಮಿ.ಮೀ., ಸೊರಬ (sorab) 39. 40 ಮಿ.ಮೀ. ಹಾಗೂ ಹೊಸನಗರದಲ್ಲಿ (hosanagara) 39. 80 ಮಿ.ಮೀ. ಮಳೆಯಾಗಿದೆ. 

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →