ಶಿವಮೊಗ್ಗ – ತೀರ್ಥಹಳ್ಳಿಯಲ್ಲಿ ಪ್ರವಾಹದ ಭೀತಿ ಮೂಡಿಸಿದ ತುಂಗಾ ನದಿ!

Tunga river that created a flood threat in Tirthahalli - Shimoga ಶಿವಮೊಗ್ಗ – ತೀರ್ಥಹಳ್ಳಿಯಲ್ಲಿ ಪ್ರವಾಹದ ಭೀತಿ ಮೂಡಿಸಿದ ತುಂಗಾ ನದಿ!

ಶಿವಮೊಗ್ಗ / ತೀರ್ಥಹಳ್ಳಿ, ಜು. 30: ಪಶ್ಚಿಮಘಟ್ಟ (western ghat) ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ನಡುವೆ ಮಂಗಳವಾರ, ತುಂಗಾ ನದಿಯು (tunga river) ಮತ್ತೆ ಮೈದುಂಬಿ ಹರಿಯಲಾರಂಭಿಸಿದೆ. ಶಿವಮೊಗ್ಗ ಹಾಗೂ ತೀರ್ಥಹಳ್ಳಿಯ ನದಿ ಪಾತ್ರದ ಹಲವೆಡೆ ಪ್ರವಾಹ (flood) ಭೀತಿ ಸೃಷ್ಟಿಸಿದೆ!

ಮಂಗಳವಾರ ಸಂಜೆಯ ಮಾಹಿತಿ ಅನುಸಾರ ಗಾಜನೂರು ತುಂಗಾ ಜಲಾಶಯದಿಂದ (gajanur tunga reservoir) ಸುಮಾರು 82 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ (outflow). ಇದರಿಂದ ಶಿವಮೊಗ್ಗ (shivamooga) ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯು (tunga river) ಅಪಾಯದ ಮಟ್ಟದಲ್ಲಿ ಹರಿಯಲಾರಂಭಿಸಿದೆ.

ಅಪಾಯದ ಮಟ್ಟ ತೋರ್ಪಡಿಸುವ, ನಗರದ (shimoga) ಕೋರ್ಪಳಯ್ಯನ ಛತ್ರ ಸಮೀಪ ತುಂಗಾ ನದಿಯಲ್ಲಿರುವ ಮಂಟಪದ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ. ಡ್ಯಾಂನಿಂದ ಹೊರಬಿಡುವ (out flow) ನೀರಿನ ಪ್ರಮಾಣ ಹೆಚ್ಚಳವಾದರೆ, ನದಿಪಾತ್ರದ ಜನವಸತಿ ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

ತೀರ್ಥಹಳ್ಳಿ (thirthahalli) ತಾಲೂಕಿನಲ್ಲಿಯೂ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದೆ (over flowing). ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ತೀರ್ಥಹಳ್ಳಿ ಪಟ್ಟಣದ ಐತಿಹಾಸಿಕ ರಾಮ ಮಂಟಪ (rama mantapa) ಮುಳುಗಡೆಯಾಗಿದೆ. ನದಿ ಪಾತ್ರದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. ನದಿ ಪಾತ್ರಕ್ಕೆ ತೆರಳದಂತೆ ಮೈಕ್ ಮೂಲಕ ನಾಗರೀಕರಿಗೆ ತಿಳಿಸಲಾಗುತ್ತಿದೆ

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →