ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗೆ ಭದ್ರಾ ಡ್ಯಾಂನಿಂದ ನೀರು  : ವಾಣಿ ವಿಲಾಸ ಸಾಗರಕ್ಕೆ ಹರಿಯುತ್ತಿರುವ ಭದ್ರೆ!

Shivamogga, Jul. 22: Water will be released from the main canal of the Bhadra Upper River Project under the Visvesvaraya Jal Nigam Limited to Vani Vilas Sagar from 27-07-2025 as per the government's directive, the announcement said.

ಶಿವಮೊಗ್ಗ (shivamogga), ಆ. 1: ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ವ್ಯಾಪ್ತಿಯಲ್ಲಿನ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗೆ (upper bhadra project) ಭದ್ರಾ ಜಲಾಶಯದಿಂದ ಜು. 31 ರಿಂದ ನೀರು ಹರಿಸಲಾಗುತ್ತಿದೆ.

ಸದರಿ ಕಾಲುವೆಯು ಭದ್ರಾ ಜಲಾಶದಿಂದ (bhadra dam) ಪ್ರಾರಂಭವಾಗಿ ಚಿಕ್ಕಮಗಳೂರು (chikkamagaluru) ಜಿಲ್ಲೆಯ ತರೀಕೆರೆ (tarikere) ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ (ajjampura) ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದೆ.

ಸರ್ಕಾರದ ನಿರ್ದೇಶನದಂತೆ ದಿ: 31-07-2024 ರಿಂದ ಶಾಂತಿಪುರ ಪಂಪ್‌ಹೌಸ್-1, ಜಂಭದಹಳ್ಳ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ ಪಂಪ್‌ಹೌಸ್-2, ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಬ್ಬೂರು ಗ್ರಾಮದ ಹತ್ತಿರವಿರುವ ವೈ-ಜಂಕ್ಷನ್‌ನಿಂದ 

ಹೆಬ್ಬೂರು, ಕಾಟಿನಗೆರೆ, ಬೆಣಕುಣಸೆ, ಮುಗಳಿ, ಬೇಗೂರು, ಆಸಂದಿ, ಹಡಗಲು, ಕಲ್ಕೆರೆ, ಹೆಚ್.ತಿಮ್ಮಾಪುರ, ಕಲ್ಲಹಳ್ಳಿ, ಚಿಕ್ಕಬಳ್ಳೆಕೆರೆ, ಹನುಮನಹಳ್ಳಿ, ಚೌಳಹಿರಿಯೂರು ಮತ್ತು ಹಿ. ತಿಮ್ಮಾಮರ ಗ್ರಾಮಮಗಳ ಮಾರ್ಗವಾಗಿ ವೇದಾವತಿ ನದಿಗೆ (vedavathi river) ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ (vani vilasa sagara dam) ನೀರನ್ನು ಹರಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ (canal and ditch basin) ಸಾರ್ವಜನಿಕರು ತಿರುಗಾಡುವುದು, ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದು ನಿಷೇಧಿಸಲಾಗಿದೆ. 

ಈ ಸೂಚನೆಗಳನ್ನು ಉಲ್ಲಂಘಿಸುವುದು, ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರಬಾಗಿದೆ.

ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸುಪರಿಂಟೆಂಡಿಂಗ್ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ (bhadra reservoir). 

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →