ಶಿವಮೊಗ್ಗ ಜಿಲ್ಲಾ ವಾಣಿಜ್ಯ- ಕೈಗಾರಿಕಾ ಸಂಘದಿಂದ ಯಡಿಯೂರಪ್ಪಗೆ ಸನ್ಮಾನ

ಶಿವಮೊಗ್ಗ, ಮಾ. 3: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದವತಿಯಿಂದ ಅವರನ್ನು ಸನ್ಮಾನಿಸಿ ಅಭಿನಂದಿಸಿತು.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರಾಜ್ಯದ ಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕ್ಷಣ, ಆರೋಗ್ಯ, ಉದ್ಯಮ, ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ ಎಂದು ಸಂಘಟನೆ ತಿಳಿಸಿದೆ.
ಈ ಸಂದರ್ಭದಲ್ಲಿ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಬಿ.ಆರ್.ಸಂತೋಷ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಪ್ರದೀಪ್ ಎಲಿ, ಹಾಲಸ್ವಾಮಿ, ಗಣೇಶ್ ಅಂಗಡಿ, ಎಂ.ರಾಜ್, ಜೆ.ಆರ್.ವಾಸುದೇವ್ ಮತ್ತಿತರರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →