ತೀರ್ಥಹಳ್ಳಿ : ಅಂದರ್ – ಬಾಹರ್ ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ!

Tirthahalli : Police attack on Andar-Bahar Ispeet gambling ! ತೀರ್ಥಹಳ್ಳಿ : ಅಂದರ್ – ಬಾಹರ್ ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ!

ತೀರ್ಥಹಳ್ಳಿ (thirthahalli), ಆ. 14: ಅಂದರ್ – ಬಾಹರ್ ಇಸ್ಪೀಟ್ ಜೂಜು (ispit gambling) ಅಡ್ಡೆ ಮೇಲೆ ಪೊಲೀಸರು ದಾಳಿ (police raid) ನಡೆಸಿ, ನಾಲ್ವರನ್ನು ಬಂಧಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಆರಗ (araga) ಗ್ರಾಮದ ಹಿರೇಸರ ಪ್ಲಾಂಟೇಷನ್ ನಲ್ಲಿ ಆ. 12 ರಂದು  ಜೂಜಾಟ (gambling) ನಡೆಯುತ್ತಿತ್ತು. ಈ ಕುರಿತಂತೆ ಪೊಲೀಸರಿಗೆ ಖಚಿತ ವರ್ತಮಾನ ಲಭಿಸಿದ್ದು, ಇದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ.

ದಾಳಿಯ ವೇಳೆ ನಾಲ್ವರು ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ಉಳಿದವರು ಪರಾರಿಯಾಗಿದ್ದಾರೆ. ಆರೋಪಿಗಳಿಂದ ಜೂಜಾಟಕ್ಕೆ ಬಳಸಿದ್ದ 12,270 ನಗದು ಮತ್ತು ಇಸ್ಪೀಟ್ ಎಲೆಗಳನ್ನು (ispit gambling cards) ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ವಿರುದ್ದ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ (thirthahalli police station), ಕರ್ನಾಟಕ ಪೊಲೀಸ್ ಕಾಯ್ದೆ ( karnataka police act ) ಕಲಂ 87 ರ ಅಡಿ  ಪ್ರಕರಣ ದಾಖಲಿಸಲಾಗಿದೆ.

ಡಿವೈಎಸ್ಪಿ (dysp) ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ (psi) ಶಿವನಗೌಡ ಮತ್ತವರ ಸಿಬ್ಬಂದಿಗಳು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →