koppal | ‘ಅಗತ್ಯಬಿದ್ದರೆ ಮುಲಾಜಿಲ್ಲದೆ HDK ಅರೆಸ್ಟ್’ : CM ಸಿದ್ದು ಗುಟುರು!

koppal | 'ಅಗತ್ಯಬಿದ್ದರೆ ಮುಲಾಜಿಲ್ಲದೆ HDK ಅರೆಸ್ಟ್' : CM ಸಿದ್ದು ಗುಟುರು! koppal | 'If necessary arrest HDK without hesitation': CM is angry!

ಕೊಪ್ಪಳ (koppal), ಆ. 21: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ (h d kumaraswamy) ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು (governor), ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ (prosecution) ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಖಾರವಾಗಿ ಪ್ರಶ್ನಿಸಿದರು.

ಅವರು ಇಂದು ಗಿಣಿಗೇರ ಏರ್‌ಸ್ಟ್ರಿಪ್‌ (ginigera airstrip) ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (hdk) ಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ (mining case) ಸಂಬಂಧಿಸಿದಂತೆ  ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ (arrest) ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಆದರೆ ಈಗ ಇನ್ನೂ ಬಂಧಿಸುವ ಸನ್ನಿನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.  

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ  ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ (lokayukta) ಎಸ್ ಐ ಟಿಯವರು ತನಿಖಾ  ವರದಿ (sit enquiry report) ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ (muda case) ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ  ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ (hit and run case) ಎಂದರು.

ರಾಜಕೀಯವಿಲ್ಲ: ಕೊಪ್ಪಳ (koppal) ಜಿಲ್ಲೆಯಲ್ಲಿ ವಿಮಾನ ನಿಲ್ದಾಣ (airport) ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

ಕೇಂದ್ರಕ್ಕೆ ಪತ್ರ : ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ (central govt) ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →