ಬೆಂಗಳೂರು / ಶಿವಮೊಗ್ಗ, ಆ. 22: ಪ್ರಸ್ತುತ ರಾಜ್ಯದ ವಿವಿಧೆಡೆ ಮುಂಗಾರು ಮಳೆ (monsoon rain) ಆರ್ಭಟ ಜೋರಾಗಿದೆ. ಈ ನಡುವೆ ಇನ್ನೂ ಒಂದು ವಾರಗಳ ಕಾಲ ಹಲವು ಜಿಲ್ಲೆಗಳಲ್ಲಿ, ಭಾರೀ ಮಳೆ (heavy rainfall) ಮುಂದುವರಿಯುವ ಮುನ್ಸೂಚನೆಯನ್ನು, ಹವಾಮಾನ ಇಲಾಖೆ (meteorological department) ನೀಡಿದೆ.
ಕರಾವಳಿ ಭಾಗಗಳಲ್ಲಿ ಶುಕ್ರವಾರದಿಂದ ಮಳೆ (rain) ಚುರುಕುಗೊಳ್ಳುವ ಸಾಧ್ಯತೆಯಿದೆ. ಈ ನಡುವೆ ಆ. 24 ರಿಂದ ಆ. 28 ರವರೆಗೆ ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹಾಗೆಯೇ ಮುಂದಿನ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ (shimoga) ಜಿಲ್ಲೆಯಲ್ಲಿಯೂ ವ್ಯಾಪಕ ಮಳೆ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಸೇರಿದಂತೆ ದಕ್ಷಿಣ ಕನ್ನಡ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ,
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಮುನ್ಸೂಚನೆಯನ್ನು ನೀಡಲಾಗಿದೆ. 6 ರಿಂದ 11 ಸೆಂಟಿ ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

